ಮೈಸೂರು ಚಾಮುಂಡಿ ಬೆಟ್ಟಕ್ಕೆ ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ…

ಮೈಸೂರು,ಸೆಪ್ಟಂಬರ್,16,2020(www.justkannada.in): ಮಹಾಲಯ ಅಮಾವಾಸ್ಯೆ ಪ್ರಯುಕ್ತ ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುವ ಹಿನ್ನೆಲೆ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಇಂದಿನಿಂದ ಮೂರು ದಿನಗಳ ಕಾಲ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ಬಿ. ಶರತ್ ಆದೇಶ ಹೊರಡಿಸಿದ್ದಾರೆ.jk-logo-justkannada-logo

ಮೈಸೂರು ಜಿಲ್ಲೆಯಲ್ಲಿ ದಿನೇ ದಿನೇ ಕೊರೋನಾ ಸೋಂಕಿತರ ಪ್ರಮಾಣ ಹೆಚ್ಚುತ್ತಿದ್ದು, ಕೋವಿಡ್ -19 ನಿಯಂತ್ರಣ ಹಿನ್ನೆಲೆಯಲ್ಲಿ  ಜಿಲ್ಲಾಡಳಿತ ವತಿಯಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ. ಮಹಾಲಯ ಅಮಾವಾಸ್ಯೆ ಪ್ರಯುಕ್ತ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತರ ದಂಡು ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಸಾಧ್ಯತೆ ಇದೆ.  ಹೀಗಾಗಿ ಇಂದಿನಿಂದ ಮೂರು ದಿನಗಳ ಕಾಲ ಚಾಮುಂಡಿಬೆಟ್ಟಕ್ಕೆ  ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿದೆ.mysore-chamundi-hill-restriction-public-three-days-today

ಹಾಗೆಯೇ ಮುಂಜಾಗ್ರತಾ ಕ್ರಮವಾಗಿ 3 ದಿನಗಳ ಕಾಲ ತಾಯಿ ಚಾಮುಂಡೇಶ್ವರಿ ದೇವಸ್ಥಾನ ಬಂದ್ ಮಾಡುವಂತೆ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಇನ್ನು ಶನಿವಾರ ಎಂದಿನಂತೆ ಭಕ್ತಾದಿಗಳಿಗೆ ಚಾಮುಂಡೇಶ್ವರಿ ದೇವಸ್ಥಾನ ತೆರೆಯಲಿದ್ದು ಭಕ್ತರು ತಾಯಿ ಚಾಮುಂಡೇಶ್ವರಿ ದರ್ಶನ ಪಡೆಯಬಹುದು. ಆಷಾಢ ಮಾಸದಲ್ಲೂ ಸಹ ಪ್ರತಿ ಶುಕ್ರವಾರದಂದು ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಲಾಗಿತ್ತು.

Key words: Mysore -Chamundi hill- restriction – public – three days – today