ಚಾಮುಂಡಿ ಬೆಟ್ಟದಲ್ಲಿ ಅರ್ಧಕ್ಕೆ ನಿಂತ ಕಾಮಗಾರಿ; ಬಾಕಿ ಇರುವ 4.5 ಕೋಟಿ ರೂ. ಮಂಜೂರು ಮಾಡುವಂತೆ ಸಚಿವರಿಗೆ ಸಂಸದರ ಮನವಿ.

 

ಮೈಸೂರು, ಜು.01, 2020 : (www.justkannada.in news) ಚಾಮುಂಡಿ ಬೆಟ್ಟದಲ್ಲಿ ಮಳಿಗೆ ನಿರ್ಮಾಣ ಕಾಮಗಾರಿಗಳನ್ನು ಸಹಕಾರ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ. ಸೋಮಶೇಖರ್ ವೀಕ್ಷಿಸಿದರು.

ಈ ಸಂದರ್ಭದಲ್ಲಿ ಸಂಸದರಾದ ಪ್ರತಾಪ್ ಸಿಂಹ, ಶಾಸಕರಾದ ಜಿ.ಟಿ.ದೇವೇಗೌಡ, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್ ಸೇರಿದಂತೆ ಅಧಿಕಾರಿಗಳು ಇದ್ದರು.

ಈ ವೇಳೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ದೇವಸ್ಥಾನದ ಎದುರು ಅವೈಜ್ಞಾನಿಕವಾಗಿ ಮಳಿಗೆಗಳನ್ನು ಕಟ್ಟಲಾಗಿತ್ತು. ಈ ಹಿನ್ನೆಲೆಯಲ್ಲಿ ಅವುಗಳನ್ನು ಸ್ಥಳಾಂತರಿಸಲಾಗಿದ್ದು, 198 ಮಳಿಗೆಗಳ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿತ್ತು. ಇದರಲ್ಲಿಯೇ ಟಾಯ್ಲೆಟ್ ಹಾಗೂ ಇತರ ಸೌಲಭ್ಯಗಳನ್ನೂ ನೋಡಿಕೊಳ್ಳಲಾಗುತ್ತದೆ. ಕಾಮಗಾರಿಗಳು ಅರ್ಧಕ್ಕೆ ಸ್ಥಗಿತಗೊಂಡ ಕಾರಣ ತ್ವರಿತವಾಗಿ ಮುಗಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಸೂಚಿಸಿದ್ದಾರೆಂದು ತಿಳಿಸಿದರು.

mysore-chamundi-hills-mp-prathap.simha

ಅಲ್ಲದೆ, ಸ್ವತಃ ಸಚಿವರೇ ಕಾಮಗಾರಿಯನ್ನು ಪರಿಶೀಲಿಸಿದ್ದು, ಬಾಕಿ ಇರುವ 4.5 ಕೋಟಿ ರೂಪಾಯಿಯನ್ನು ಮಂಜೂರು ಮಾಡಿಸಿಕೊಡುವಂತೆ ಸಚಿವರಿಗೆ ಮನವಿ ಮಾಡಿದ್ದು, ಅವರೂ ಸಹ ತಕ್ಷಣ ಬಿಡುಗಡೆ ಮಾಡಿಸುವುದಾಗಿ ತಿಳಿಸಿದ್ದಾರೆಂದು ಸಂಸದರು ತಿಳಿಸಿದರು.

oooooooo

key words : mysore-chamundi-hills-mp-prathap.simha

———-