ತಾಯಿ ಚಾಮುಂಡೇಶ್ವರಿ ವರ್ಧಂತಿ: ಉತ್ಸವ ಮೂರ್ತಿಗೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮತ್ತು ಯದುವೀರ್ ರಿಂದ ಪೂಜೆ ಸಲ್ಲಿಕೆ.

ಮೈಸೂರು,ಜುಲೈ,20,2022(www.justkannada.in):  ಇಂದು ತಾಯಿ ಚಾಮುಂಡೇಶ್ವರಿ ವರ್ಧಂತಿ ಹಿನ್ನೆಲೆ, ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಚಿನ್ನದ ಪಲ್ಲಕಿ ಉತ್ಸವ ಜರುಗಿತು. ಉತ್ಸವ ಮೂರ್ತಿಗೆ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್, ಯದುವೀರ್ ಕೃಷ್ಣ ದತ್ತ ಚಾಮರಾಜ ಒಡೆಯರ್ ಪೂಜೆ ಸಲ್ಲಿಸಿದರು.

ಉತ್ಸವ ಮೂರ್ತಿಯನ್ನು ಪಲ್ಲಕ್ಕಿಯಲ್ಲಿ ಇರಿಸಿ ಪ್ರಧಾನ ಅರ್ಚಕ ಶಶಿಶೇಖರ್ ದೀಕ್ಷಿತ್ ಪೂಜೆ ಸಲ್ಲಿಸಿದರು. ವರ್ಧಂತಿ ದಿನದಂದು ತಾಯಿ ಚಾಮುಂಡೇಶ್ವರಿ ಕೇಸರಿ ಬಣ್ಣದ ರೇಷ್ಮೆ ವಸ್ತ್ರದಲ್ಲಿ ಕಂಗೊಳಿಸುತ್ತಿದ್ದು, ಉತ್ಸವ ಮೂರ್ತಿಗೆ ದೇವಸ್ಥಾನದ ಪರಾಂಗಣದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯತು.

ಇನ್ನು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಶ್ವೇತ ವರ್ಣದ ಪೋಷಾಕು ಹಸಿರು ಬಣ್ಣದ ಪೇಟದಲ್ಲಿ ಕಂಗೊಳಿಸುತ್ತಿದ್ದರು.

Key words: mysore-chamundi hills-pramodadevi wodeyar- yaduvir