ಸಿದ್ಧರಾಮಯ್ಯ ನಮ್ಮ ನಾಯಕರು: ಹುಣಸೂರಿನಲ್ಲಿ ನಮ್ಮ ಅಭ್ಯರ್ಥಿ ಗೆದ್ದಾಗಿದೆ ಎಂದ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್….

ಮೈಸೂರು,ನ,25,2019(www.justkannada.in): ಇಲ್ಲಿನ ರಾಜಕೀಯ ಪರಿಸ್ಥಿತಿ ನೋಡಿದರೆ ನಾವು ಗೆದ್ದಾಗಿದೆ. ಹುಣಸೂರಿನಲ್ಲಿ ನಮ್ಮ ಅಭ್ಯರ್ಥಿ ಎಚ್.ಪಿ ಮಂಜುನಾಥ್ ಗೆಲುವು ಸಾಧಿಸಿದ್ದಾರೆ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಹೇಳಿದರು.

ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಭೇಟಿ ನೀಡಿದ ಮಾಜಿ ಡಿಸಿಎಂ ಪರಮೇಶ್ವರ್ ನಾಡದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದರು. ಬಳಿಕ ಮಾಧ್ಯಮದ ಜತೆ ಮಾತನಾಡಿದ ಡಾ.ಜಿ.ಪರಮೇಶ್ವರ್,  ಮಧ್ಯಪ್ರದೇಶದಲ್ಲೂ ಪಕ್ಷಾಂತರ ಮಾಡಿದವರು ಸೋತಿದ್ದಾರೆ.  ಇಲ್ಲಿನ ರಾಜಕೀಯ ಪರಿಸ್ಥಿತಿಯನ್ನು ಗಮನಿಸಿದರೆ ನಾವು ಗೆದ್ದಾಗಿದೆ. ನಮ್ಮ ಅಭ್ಯರ್ಥಿ ಎಚ್.ಪಿ.ಮಂಜುನಾಥ್ ಗೆಲುವು ಸಾಧಿಸಿದ್ದಾರೆ. ಹುಣಸೂರಿನಲ್ಲಿ ನಾವು ಗೆದ್ದಿದ್ದೇವೆ ಎಂದು ಹೇಳಿದರು.

ಬಿಜೆಪಿಯವರಿಗೆ ಬೇರೆ ಯಾವುದೇ ವಿಷಯ ಇಲ್ಲ. ಸಿದ್ದರಾಮಯ್ಯ ವಿರುದ್ಧ ಮಾತನಾಡಲು ಬಿಜೆಪಿ ಅವರಿಗೆ ವಿಷಯಗಳೇ ಇಲ್ಲ. ಆದ್ದರಿಂದ ಏಕಾಂಗಿ ಅಂತ ಹೇಳುತ್ತಿದ್ದಾರೆ, ಸಿದ್ದರಾಮಯ್ಯ ನಮ್ಮ ನಾಯಕರು.  ಅವರ ನಾಯಕತ್ವದಲ್ಲೇ ನಾವು ಚುನಾವಣೆ ಎದುರಿಸುತ್ತಿದ್ದೇವೆ.  ರಾಜ್ಯದಲ್ಲಿ ಅತಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ.  ಬಿಜೆಪಿ ಸರ್ಕಾರ ಉಳಿಯುತ್ತ ಇಲ್ವ ಎನ್ನುವುದನ್ನು ಡಿಸೆಂಬರ್ 5ರ ನಂತರ ಹೇಳುತ್ತೇನೆ ಎಂದು ಡಾ.ಜಿ.ಪರಮೇಶ್ವರ್ ತಿಳಿಸಿದರು.

Key words: mysore-chamundihills-  Former DCM- Dr G Parameshwar – our candidate- won – Hunsur.