ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಕೋವಿಡ್ 3 ನೇ ಅಲೆ ಎದುರಿಸಲು ಸರಕಾರ ಸನ್ನದ್ಧ : ಸಚಿವೆ ಶಶಿಕಲಾ ಜೊಲ್ಲೆ

ಮೈಸೂರು, ಜೂ.19, 2021 : ( www.justkannada.in news ) ರಾಜ್ಯದಲ್ಲಿ 48 ಮಕ್ಕಳು ಕೋವಿಡ್‌ನಿಂದ ತಂದೆ – ತಾಯಿ ಕಳೆದುಕೊಂಡಿದ್ದಾರೆ. 900ಕ್ಕೂ ಹೆಚ್ಚು ಮಕ್ಕಳಿಗೆ ಏಕಪೋಷಕರು ಆಗಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಮಾಹಿತಿ ನೀಡಿದ್ದಾರೆ.

ಮೈಸೂರಿನಲ್ಲಿ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಶಶಿಕಲಾ ಜೊಲ್ಲೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದರು. ಒಟ್ಟಾರೆ ವಿವರ ಹೀಗಿದೆ..

jk

ಕೋವಿಡ್ ನಿಂದ ಪೋಷಕರನ್ನು ಕಳೆದುಕೊಂಡು ಸಂಕಷ್ಠದಲ್ಲಿರುವ ಮಕ್ಕಳಿಗಾಗಿ ರಾಜ್ಯ ಸರ್ಕಾರ ಬಾಲ ಸೇವಾ ಯೋಜನೆ ಜಾರಿಗೊಳಿಸಿದೆ. ಮಕ್ಕಳನ್ನು ದತ್ತು ಪಡೆಯಲು ಮುಂದಾಗುವವರಿಗೆ ಇಲಾಖೆ ಕೊಂಡಿಯಾಗಿ ಕೆಲಸ ಮಾಡಲಿದೆ. ಅನಾಥ ಮಕ್ಕಳ ಭವಿಷ್ಯ ರೂಪಿಸುವ ನಿಟ್ಟಿನಲ್ಲಿ ಸರಕಾರದ ಈ ಕ್ರಮ ಪ್ರಮುಖ ಪಾತ್ರ ನಿರ್ವಹಿಸಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

ಮೂರನೇ ಅಲೆ ಮಕ್ಕಳ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಬಹುದು ಎಂದು ಅಂದಾಜಿಸಲಾಗಿದೆ. ಈ ಹಿನ್ನೆಲೆಯಲ್ಲಿ ಪ್ರತಿ ತಾಲೂಕಿನಲ್ಲೂ ಕೋವಿಡ್ ಕೇರ್ ಸೆಂಟರ್ ತೆರೆಯುತ್ತೇವೆ. ಮಗುವಿನ ಜತೆ ತಾಯಿ ಸಹ ಜತೆಗೆ ಉಳಿದುಕೊಳ್ಳುವ ವ್ಯವಸ್ಥೆ ಮಾಡುತ್ತೇವೆ ಎಂದರು.

ಈಗಾಗಲೇ ರಾಜ್ಯದಲ್ಲಿನ 9200 ಬಡ ಮಕ್ಕಳನ್ನು ಸರಕಾರದ ವತಿಯಿಂದ ಗುರುತಿಸಲಾಗಿದೆ. ಈ ಕುಟುಂಬಗಳಿಗೆ ಪೌಷ್ಠಿಕ ಆಹಾರ ದೊರಕಿಸುವ ನಿಟ್ಟಿನಲ್ಲೂ ಪ್ರಯತ್ನ ಮಾಡಲಾಗುವುದು. ಮೈಸೂರಿನಲ್ಲಿ ಸಚಿವೆ ಶಶಿಕಲಾ ಜೊಲ್ಲೆ ಸುದ್ದಿಗೋಷ್ಠಿಯಲ್ಲಿ ಹೇಳಿಕೆ.
ಕರೊನಾ ನಡುವೆ ಬಾಲ್ಯ ವಿವಾಹ ಜೋರು.

ರಾಜ್ಯಾದ್ಯಂತ ಲಾಕ್‌ಡೌನ್ ಅವಧಿಯಲ್ಲೇ ಬಾಲ್ಯ ವಿವಾಹ ಹೆಚ್ಚು. ಈ ಸಂಬಂಧ ರಾಜ್ಯಾದ್ಯಂತ ಈತನಕ 3589 ದೂರು ಬಂದಿವೆ. 3272 ಮದುವೆ ಆಗಿರುವ ಬಗ್ಗೆ ಮಾಹಿತಿ ದೊರಕಿದೆ. ಈ ಸಂಬಂಧ 2008 ಎಫ್‌ಐಆರ್ ದಾಖಲಿಸಿದ್ದೇವೆ. ಜತೆಗೆ ಜನರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲೂ ಕ್ರಮಗಳಾಗಿವೆ. ಆಶಾ ಕಾರ್ಯಕರ್ತೆಯರು, ಎನ್‌ಜಿಒದವರು ಅಲರ್ಟ್ ಆಗಿ ಕೆಲಸ ಮಾಡುತ್ತಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಈ ವರ್ಷ ಕಡಿಮೆ ಬಾಲ್ಯ ವಿವಾಹ ನಡೆದಿವೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಶಿಶಕಲಾ ಜೊಲ್ಲೆ ಮಾಹಿತಿ.

key words : mysore-child-welfare-minister-shashikalla-jolle-meeting-covid-child-marriage