ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದ ವ್ಯಕ್ತಿಗೆ ಭಾರಿ ಮೊತ್ತದ ದಂಡ ವಿಧಿಸಿದ ಮೈಸೂರು ಮಹಾನಗರ ಪಾಲಿಕೆ…

ಮೈಸೂರು,ಫೆಬ್ರವರಿ,9,2021(www.justkannada.in):  ನಗರದಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುವವರ ಮೇಲೆ ಮೈಸೂರು ಮಹಾನಗರ ಪಾಲಿಕೆ  ಕಠಿಣ ಕ್ರಮ ಕೈಗೊಳ್ಳಲು ಮುಂದಾಗಿದೆ.jk

ಹೌದು, ಕಸ ಎಸೆಯುವವರ ಮೇಲೆ ಮೈಸೂರು ಮಹಾನಗರ ಪಾಲಿಕೆ ನಿರ್ದಾಕ್ಷಿಣ್ಯ ಕ್ರಮಕ್ಕೆ ಮುಂದಾಗಿದ್ದು, ಕಸ ಎಸೆಯುತ್ತಿದ್ದ ವ್ಯಕ್ತಿಗೆ ಪಾಲಿಕೆ ಅಧಿಕಾರಿಗಳು ಭಾರಿ ಮೊತ್ತದ ದಂಡ ವಿಧಿಸಿದ್ದಾರೆ. mysore-city-corporation-fined-man-threw-garbage

ವಾರ್ಡ್ 53ರಲ್ಲಿ ಎಲ್ಲೆಂದರಲ್ಲಿ ಕಸ ಎಸೆಯುತ್ತಿದ್ದ ವ್ಯಕ್ತಿಗೆ ಸ್ಥಳದಲ್ಲೇ 2000 ರೂಪಾಯಿ ದಂಡವನ್ನ ವಿಧಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಕಸ ಬಿಸಾಡುವುದು, ಉಗುಳುವುದು ಕಂಡುಬಂದಲ್ಲಿ ದಂಡ ವಿಧಿಸುವುದಾಗಿ  ಮಹಾನಗರ ಪಾಲಿಕೆ ಎಚ್ಚರಿಕೆ ನೀಡಿತ್ತು.

Key words: Mysore city corporation- fined – man -threw -garbage.