ಮೈಸೂರು ನಗರ ಮಹಿಳಾ ಕಾಂಗ್ರೆಸ್ ನೂತನ ಅಧ್ಯಕ್ಷೆಯಾಗಿ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ ನೇಮಕ..

ಮೈಸೂರು,ನ,7,2019(www.justkannada.in): ಮೈಸೂರು ನಗರ ಮಹಿಳಾ ಕಾಂಗ್ರೆಸ್ ಗೆ ನೂತನ ಅಧ್ಯಕ್ಷರ ನೇಮಕ ಮಾಡಲಾಗಿದೆ.

ಮೈಸೂರು ನಗರ ಮಹಿಳಾ ಕಾಂಗ್ರೆಸ್  ನ ನೂತನ ಅಧ್ಯಕ್ಷೆಯಾಗಿ ಮಾಜಿ ಮೇಯರ್ ಪುಷ್ಪಲತಾ ಚಿಕ್ಕಣ್ಣ ಅವರನ್ನ ನೇಮಕ ಮಾಡಿ ರಾಜ್ಯ ಕಾಂಗ್ರೆಸ್ ಘಟಕ ಆದೇಶ ಹೊರಡಿಸಿದೆ. ಈ ಹಿಂದೆ ಪುಷ್ಪಲತಾ ಚಿಕ್ಕಣ್ಣ ಅವರು ಕಾಂಗ್ರೆಸ್ ಪಕ್ಷದ ಸಂಘಟನೆಯ ಜವಾಬ್ದಾರಿ ಹೊತ್ತಿದ್ದರು.

ಇನ್ನು ಮೈಸೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ಗೆ  ಲತಾಸಿದ್ದಶೆಟ್ಟಿ ಅವರನ್ನ ರಾಜ್ಯ ಕಾಂಗ್ರೆಸ್ ಆಯ್ಕೆ ಮಾಡಿದೆ. ಲತಾ ಸಿದ್ಧಶೆಟ್ಟಿ  ಅವರು ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷೆ ಯಾಗಿದ್ದಾರೆ. ಈ ಮೂಲಕ ಕಾಂಗ್ರೆಸ್ ಮೈಸೂರಿನಲ್ಲಿ ಹಿಂದುಳಿದ ವರ್ಗಗಳಿಗೆ ಮಣೆ ಹಾಕಿದೆ.

Key words: Mysore city- women’s congress- appoints -former mayor-puspalatha chikkanna