ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ  ಡಿಕ್ಕಿ:  ಸವಾರ ಸ್ಥಳದಲ್ಲೇ ಸಾವು…

ಮೈಸೂರು,ಡಿ,7,2019(www.justkannada.in): ಬೈಕ್ ಮತ್ತು ಸ್ವಿಫ್ಟ್ ಕಾರು ನಡುವೆ ಅಪಘಾತ ಸಂಭವಿಸಿ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ನಡೆದಿದೆ.

ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ವಡ್ಡಂಬಾಳು ಗ್ರಾಮದ ಬಳಿ ಈ ಘಟನೆ ನಡೆದಿದೆ. ಪಿರಿಯಾಪಟ್ಟಣ ತಾಲ್ಲೂಕಿನ ಹುಣಸೇವಾಡಿ ಗ್ರಾಮದ ರಘು ಮೃತ ಪಟ್ಟವರು. ವಡ್ಡಂಬಾಳು ಗ್ರಾಮದ  ಎದುರುಗಡೆಯಿಂದ ಬಂದು ಬೈಕ್‌ಗೆ ಸ್ವಿಫ್ಟ್ ಕಾರು ಡಿಕ್ಕಿ ಹೊಡೆದು ಈ ದುರ್ಘಟನೆ ಸಂಭವಿಸಿದೆ.

ಅಪಘಾತದ ನಂತರ ಕಾರನ್ನು ಬಿಟ್ಟು ಚಾಲಕ ಪರಾರಿಯಾಗಿದ್ದು ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ.

Key words: mysore-Collision-bike – swift car-rider -died -on the spot.