ನೆರೆ ಪರಿಹಾರ ನೀಡದ ಕೇಂದ್ರ, ರಾಜ್ಯ ಸರ್ಕಾರದ ವಿರುದ್ದ ಮೈಸೂರಿನಲ್ಲಿ ಪ್ರತಿಭಟನೆ: ಹಾನಿಗೀಡಾದ ಬೆಳೆಗಳನ್ನ ಪಿಎಂ ಮೋದಿಗೆ ಸ್ಪೀಡ್ ಪೋಸ್ಟ್ ಮಾಡಿದ ಕಾಂಗ್ರೆಸ್…

ಮೈಸೂರು,ಸೆ,20,2019(www.justkannada.in): ನೆರೆ ಪರಿಹಾರ ನೀಡದ ಕೇಂದ್ರ ಮತ್ತು ರಾಜ್ಯ ಸರ್ಕಾರದ ವಿರುದ್ದ ಮೈಸೂರಿನಲ್ಲಿ  ಕಾಂಗ್ರೆಸ್ ಮುಖಂಡರು ಪ್ರತಿಭಟನೆ ನಡೆಸಿದರು.

ಮೈಸೂರು ಜಿಲ್ಲಾ ಮಹಿಳಾ ಕಾಂಗ್ರೆಸ್ ವತಿಯಿಂದ  ಬೃಹತ್ ಪ್ರತಿಭಟನೆ ನಡೆಸಲಾಯಿತು. ಕೆಪಿಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಪುಷ್ಪಅಮರ್ ನಾಥ್ ನೇತೃತ್ವದಲ್ಲಿ ನಗರ  ಕಾಂಗ್ರೆಸ್ ಕಚೇರಿಯಿಂದ  ಲಷ್ಕರ್ ಪೊಲೀಸ್ ಸ್ಟೇಷನ್ ಬಳಿ ಇರುವ ಅಂಚೆ ಕಚೇರಿ ಬಳಿ ವರೆಗೂ ಬೃಹತ್ ರ್ಯಾಲಿ ನಡೆಸಿ ಕೇಂದ್ರ ರಾಜ್ಯ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತಪಡಿಸಿದರು.

ಬೃಹತ್ ಪ್ರತಿಭಟನಾ ರ್ಯಾಲಿಯಲ್ಲಿ  ಎಐಸಿಸಿ  ಕಾರ್ಯದರ್ಶಿ  ವಿಷ್ಣುನಾಥನ್,  ಮಾಜಿ ಸಚಿವ ಡಾ. ಹೆಚ್ ಸಿ ಮಹದೇವಪ್ಪ ಮತ್ತಿತರರು ಭಾಗಿಯಾಗಿದ್ದರು. .

ಪ್ರವಾಹಪೀಡಿತ ಪ್ರದೇಶಗಳಲ್ಲಿ ಹಾನಿಗೀಡಾದ ಬೆಳೆಗಳನ್ನು  ಸನ್ಮಾನ್ಯ ಪ್ರಧಾನಮಂತ್ರಿಗಳಾದ ಶ್ರೀ ನರೇಂದ್ರ ಮೋದಿ ಅವರಿಗೆ ಸ್ಪೀಡ್ ಪೋಸ್ಟ್ ಮುಖಾಂತರ ಕಳುಹಿಸಲಾಯಿತು.

Key words: Mysore- congress-protests- against- Center- State government