Thursday, August 20, 2026

BDA Apartments

Home Front Page ಇಂದು ‘ಕೈ’ ಮತ್ತು ಬಿಜೆಪಿ ಅಭ್ಯರ್ಥಿ ನಾಮಪತ್ರ: ರಾಜಕೀಯ ಶಕ್ತಿ ಕೇಂದ್ರವಾದ ಅರಮನೆ ನಗರಿ ಮೈಸೂರು.

ಇಂದು ‘ಕೈ’ ಮತ್ತು ಬಿಜೆಪಿ ಅಭ್ಯರ್ಥಿ ನಾಮಪತ್ರ: ರಾಜಕೀಯ ಶಕ್ತಿ ಕೇಂದ್ರವಾದ ಅರಮನೆ ನಗರಿ ಮೈಸೂರು.

ಮೈಸೂರು,ಏಪ್ರಿಲ್ ,3,2024 (www.justkannada.in): ಲೋಕಸಭಾ ಚುನಾವಣಾ ಅಖಾಡ ರಂಗೇರಿದ್ದು ಇಂದು ಮೈಸೂರು –ಕೊಡಗು ಕ್ಷೇತ್ರದ ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳು ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ಹಿನ್ನೆಲೆಯಲ್ಲಿ ಇಂದು ಸಾಂಸ್ಕೃತಿಕ ನಗರಿ ಮೈಸೂರು ರಾಜಕೀಯ ನಾಯಕರ ಸಮಾಗಮಕ್ಕೆ ಸಾಕ್ಷಿಯಾಗಲಿದೆ.

ಅರಮನೆ ನಗರಿ ಮೈಸೂರು ರಾಜಕೀಯ ಶಕ್ತಿ ಕೇಂದ್ರವಾಗಿದ್ದು,  ಸಿಎಂ, ಡಿಸಿಎಂ, ಮಾಜಿ ಸಿಎಂಗಳು, ರಾಜ್ಯಾಧ್ಯಕ್ಷರುಗಳು, ಸಚಿವರು, ಮಾಜಿ ಸಚಿವರುಗಳ ಇಂದು  ಸಮಾಗಮವಾಗಲಿದ್ದಾರೆ. ಮಧ್ಯಾಹ್ನ 12 ಗಂಟೆಗೆ  ಮೈಸೂರು -ಕೊಡಗು ಬಿಜೆಪಿ ಅಭ್ಯರ್ಥಿ ಯದುವೀರ್ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಬೆಳಿಗ್ಗೆ 10.30ಕ್ಕೆ ಅರಮನೆ ಕೋಟೆ ಅಂಜನೇಯಸ್ವಾಮಿ ದೇವಾಲಯದಲ್ಲಿ ಯದುವೀರ್ ಅವರು ವಿಶೇಷ ಪೂಜೆ ಸಲ್ಲಿಸಲಿದ್ದು, ನಂತರ ಮೆರವಣಿಗೆ ಮೂಲಕ ನೂತನ ಜಿಲ್ಲಾಧಿಕಾರಿಗೆ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ.

ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ, ಮಾಜಿ ಸಚಿವ ಅಶ್ವಥ್ ನಾರಾಯಣ್ ಹಾಗೂ ಯದುವೀರ್ ತಾಯಿ ಪ್ರಮೋದಾ ದೇವಿ ಒಡೆಯರ್, ಸಂಸದರಾದ ಪ್ರತಾಪ್‌ ಸಿಂಹ, ಪ್ರೀತಮ್‌ ಗೌಡ ಅವರು ಯದುವೀರ್ ಗೆ ಸಾಥ್ ನೀಡಲಿದ್ದಾರೆ.

ಮತ್ತೊಂದೆಡೆ ಕಾಂಗ್ರೆಸ್ ಅಭ್ಯರ್ಥಿ ಎಂ.ಲಕ್ಷ್ಮಣ್ ರಿಂದಲೂ ನಾಮಪತ್ರ ಸಲ್ಲಿಕೆಯಾಗಲಿದೆ. ಮಧ್ಯಾಹ್ನ 2.30ಕ್ಕೆ ಎಂ.  ಲಕ್ಷ್ಮಣ್ ಕಾಂಗ್ರೆಸ್ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಲಿದ್ದಾರೆ.  ಮಧ್ಯಾಹ್ನ 1 ಗಂಟೆಗೆ ಯರಗನಹಳ್ಳಿ ವೃತ್ತದಿಂದ ಮೆರವಣಿಗೆ ಮೂಲಕ ತೆರಳಿ ನಾಮಪತ್ರ ಸಲ್ಲಿಕೆ ಮಾಡಲಿದ್ದಾರೆ. ಈ ವೇಳೆ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆ.ಶಿವಕುಮಾರ್ ಸಚಿವರಾದ ಡಾ.ಹೆಚ್.ಸಿ.ಮಹದೇವಪ್ಪ, ಕೆ.ವೆಂಕಟೇಶ್  ಅವರು ಲಕ್ಷ್ಮಣ್ ಗೆ ಸಾಥ್ ನೀಡಲಿದ್ದಾರೆ.

Key words: mysore, congress,BJP, nomination