ನಾಲ್ಕು ಸಿಬ್ಬಂದಿಗೆ ಕೊರೋನಾ ಸೋಂಕು ದೃಢ: ಪೊಲೀಸ್ ಠಾಣೆ ಸೀಲ್ ಡೌನ್…

ಮೈಸೂರು,ಜು,24,2020(www.justkannada.in):   ಮಲ್ಲಿಗೆ ನಗರಿ ಮೈಸೂರಿನಲ್ಲಿ ಕೊರೋನಾ ವಾರಿಯರ್ಸ್ ಗಳಿಗೂ ಕೊರೋನಾ ಮಹಾಮಾರಿ ಹರಡುತ್ತಿದ್ದು, ನಗರದ ಮಂಡಿ ಮೊಹಲ್ಲಾ ಪೊಲೀಸ್ ಠಾಣೆಯ ನಾಲ್ಕು ಸಿಬ್ಬಂದಿಗಳಿಗೆ ಸೋಂಕು ದೃಢವಾಗಿದೆ.jk-logo-justkannada-logo

ಸಿಬ್ಬಂದಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನೆಲೆ ಆರೋಗ್ಯ ಇಲಾಖೆ ಅಧಿಕಾರಿಗಳು ಮಂಡಿ ಮೊಹಲ್ಲಾ ಪೊಲೀಸ್ ಠಾಣೆ ಸೀಲ್ ಡೌನ್  ಮಾಡಿದ್ದಾರೆ. ಸೋಂಕಿತರ ಸಂಪರ್ಕದಲ್ಲಿದ್ದ 50 ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗೆ ಕ್ವಾರಂಟೈನ್ ಮಾಡಲಾಗಿದೆ.mysore-coronavirus-staff-police-station-seal-down

ನಿನ್ನೆಯಷ್ಟೆ ನಗರ ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದ ಸಿಬ್ಬಂದಿ ಓರ್ವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿತ್ತು ಈ ಹಿನ್ನೆಲೆಯಲ್ಲಿ ಪೊಲೀಸ್ ಕಮಿಷನರ್ ನೂತನ ಕಟ್ಟಡವೂ ಕೂಡ ಸೀಲ್ ಡೌನ್ ಆಗಿತ್ತು.

Key words: mysore-Coronavirus -staff – Police Station -Seal Down.