ಮೈಸೂರು,ನವೆಂಬರ್,13,2026 (www.justkannada.in): ವಿಜ್ಞಾನ, ತಂತ್ರಜ್ಞಾನ, ಶಿಕ್ಷಣಕ್ಕೆ ಕರ್ನಾಟಕದ ಕೊಡುಗೆ ಅಪಾರವಾದುದು. ಕಾಸ್ಮೋಸ್ ತಾರಾಲಯ ಉದ್ಘಾಟನೆ ಕರ್ನಾಟಕಕ್ಕೆ ಮತ್ತೊಂದು ಗರಿ ಎಂದು ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನುಡಿದರು.
ಮೈಸೂರಿನಲ್ಲಿ ಕಾಸ್ಮೋಸ್ ತಾರಾಲಯ ಉದ್ಘಾಟನೆ ಬಳಿಕ ವೇದಿಕೆಯಲ್ಲಿ ಮಾತನಾಡಿದ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್, ಎಲ್ಲರಿಗೂ ನಮಸ್ಕಾರ ಎಂದು ಕನ್ನಡದಲ್ಲಿ ಭಾಷಣ ಆರಂಭಿಸಿದರು. ಇದು ದೇಶದ ಪ್ರಧಾನಿ ನರೇಂದ್ರ ಮೋದಿ ಅವರ ಕೊಡುಗೆ. ತಾಯಿ ಚಾಮುಂಡೇಶ್ವರಿ ಆಶೀರ್ವಾದದೊಂದಿಗೆ ಕಾಸ್ಮೋಸ್ ತಾರಾಲಯ ಆರಂಭವಾಗಿದೆ ಎಂದು ಕರ್ನಾಟಕ ಸರ್ಕಾರ, ಮೈಸೂರು ವಿವಿ ಹಾಗೂ ಜಿಲ್ಲಾಡಳಿತಕ್ಕೆ ಧನ್ಯವಾದ ತಿಳಿಸಿದರು.
ಶಾಲೆ ಕಾಲೇಜು ಅರಿವು ಕೇಂದ್ರಗಳಲ್ಲಿ ಇದನ್ನು ಲೈವ್ ಮಾಡಲಾಗುತ್ತಿದೆ. ಕರ್ನಾಟಕ ಹಿಂದಿನಿಂದಲೂ ವಿಜ್ಞಾನಕ್ಕೆ ತನ್ನದೇ ಕೊಡುಗೆ ನೀಡುತ್ತಾ ಬಂದಿದೆ. ಮೈಸೂರು ಮಹಾರಾಜರು ಸಹಾ ಇದಕ್ಕೆ ಭೂಮಿ ಕೊಡುಗೆ ನೀಡಿದ್ದಾರೆ. ಇದು ಕರ್ನಾಟಕಕ್ಕೆ ಮತ್ತೊಂದು ಗರಿ. ಮೈಸೂರಿನ ವಿದ್ಯಾರ್ಥಿಗಳಿಗೆ ಇದು ಸುವರ್ಣ ಅವಕಾಶವಾಗಿದೆ. ಮೈಸೂರಿನ ಪ್ರವಾಸೋದ್ಯಮಕ್ಕೂ ಇದು ಕೊಡುಗೆ ನೀಡಲಿದೆ. ಮೈಸೂರಿಗೆ ಇದಕ್ಕಾಗಿಯೇ ಪ್ರವಾಸಿಗರು ಬರುತ್ತಾರೆ. ಇದರಿಂದ ಪ್ರವಾಸೋದ್ಯಮ ಅಭಿವೃದ್ದಿಯಾಗಲಿದೆ. ಸ್ಥಳೀಯ ವ್ಯಾಪಾರ ವೃದ್ದಿಯಾಗಲಿದೆ. ವಿದ್ಯಾರ್ಥಿಗಳು ಹಾಗೂ ಸಂದರ್ಶಕರಿಗೆ ಇದು ಬಾಹ್ಯಕಾಶದ ಸಂಪೂರ್ಣ ಮಾಹಿತಿ ನೀಡಲಿದೆ ಎಂದರು.
ವಿಜ್ಞಾನ – ತಂತ್ರಜ್ಞಾನ – ಶಿಕ್ಷಣಕ್ಕೆ ಕರ್ನಾಟಕದ ಕೊಡುಗೆ ಅಪಾರ. ಮೈಸೂರು ಮಹಾರಾಜರು ಕೂಡ ವಿಜ್ಞಾನ – ತಂತ್ರಜ್ಞಾನ ಬೆಳವಣಿಗೆಗೆ ಅಪಾರ ಕೊಡುಗೆ ನೀಡಿದರು. ದೇಶದ ವಿಜ್ಞಾನದ ಬೆಳವಣಿಗೆಗೆ ಕರ್ನಾಟಕದ ಕೊಡುಗೆ ಅಧಿಕ. ಖಗೋಳ ಶಿಕ್ಷಣವನ್ನು ಮಕ್ಕಳಿಗೆ ಹೆಚ್ಚು ಹತ್ತಿರ ಮಾಡಲು ಈ ತಾರಾಲಯ ಅನೂಕುಲವಾಗಿದೆ. ಪ್ರವಾಸೋದ್ಯಮ ಬೆಳವಣಿಗೆ ದೃಷ್ಟಿಯಿಂದಲ್ಲೂ ಕೂಡ ಈ ತಾರಾಲಯ ಮಹತ್ವ ಪಡೆದಿದೆ ಎಂದು ತಿಳಿಸಿದರು.
ಹಾಗೆಯೇ ಜೈ ಜವಾನ್ ಜೈ ಕಿಶಾನ್ ಲಾಲ್ ಬಹದ್ದೂರ್ ಶಾಸ್ತ್ರಿ ನೀಡಿದರು. ಅಟಲ್ ಬಿಹಾರಿ ವಾಜಪೇಯಿ ಅದಕ್ಕೆ ವಿಜ್ಞಾನ ಸೇರಿಸಿದರು. ಮೋದಿ ಜೈ ಅನುಸಂಧನಾ ಸೇರಿಸಿದ್ದಾರೆ ಎಂದು ನಿರ್ಮಲಾ ಸೀತಾರಾಮನ್ ನುಡಿದರು.






