ಪತ್ನಿ ಶೀಲ ಶಂಕಿಸಿ ಕೊಲೆ ಮಾಡಿದ್ದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿದ ಕೋರ್ಟ್

ಮೈಸೂರು,ಜೂನ್,20,2024 (www.justkannada.in): ಪತ್ನಿಯ ಶೀಲ ಶಂಕಿಸಿ ಕೊಲೆ ಮಾಡಿದ ಆರೋಪಿಗೆ ಜೀವಾವಧಿ ಶಿಕ್ಷೆ ವಿಧಿಸಿ  ಮೈಸೂರಿನ 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಆದೇಶ ಹೊರಡಿಸಿದೆ.

ರವಿ ಜೀವಾವಧಿ ಶಿಕ್ಷೆಗೆ ಒಳಗಾದ ವ್ಯಕ್ತಿ. ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನ ದೇಬೂರು ಗ್ರಾಮದ ನಿವಾಸಿಯಾಗಿದ್ದು, 6-12-2020 ರಂದು ಪತ್ನಿ ಅಮುದಾ ಶೀಲ ಶಂಕಿಸಿ ರವಿ ಕೊಲೆ ಮಾಡಿದ್ದನು.

ಇದೀಗ ಈ ಪ್ರಕರಣ ಸಂಬಂಧ ಆರೋಪಿ ರವಿಗೆ ಐಪಿಸಿ ಸೆಕ್ಷನ್ 498(ಎ ) ಪ್ರಕಾರ 2 ವರ್ಷ ಕಠಿಣ ಶಿಕ್ಷೆ ಒಂದು ಸಾವಿರ ದಂಡ, ಐಪಿಸಿ ಸೆಕ್ಷನ್ 302 ಪ್ರಕಾರ ಜೀವಾವಧಿ ಶಿಕ್ಷೆ ಹಾಗೂ ಐದು ಸಾವಿರ ದಂಡ ವಿಧಿಸಿ ಮೈಸೂರು 5ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ನ್ಯಾಯಾಧೀಶ ಗುರುರಾಜ್ ಸೋಮಕ್ಕಳವರ್ ತೀರ್ಪು ನೀಡಿದ್ದಾರೆ. ಪ್ರಕರಣ ನಡೆದು ನಾಲ್ಕು ವರ್ಷಗಳ ಬಳಿಕ ನ್ಯಾಯಾಲಯ ತೀರ್ಪು ನೀಡಿದೆ.

Key words: mysore court, murder, accused, life imprisonment