Sunday, September 13, 2026

BDA Apartments

ಮೈಸೂರು ದಸರಾ-2019: ಅರ್ಜುನನಿಗೆ ಅಂಬಾರಿ ಕಟ್ಟುವ ಕಾರ್ಯ ಆರಂಭ BDA JK_Adv BDA Adv
Home DASARA-2019 ಮೈಸೂರು ದಸರಾ-2019:  ಅರ್ಜುನನಿಗೆ ಅಂಬಾರಿ ಕಟ್ಟುವ ಕಾರ್ಯ ಆರಂಭ..

ಮೈಸೂರು ದಸರಾ-2019:  ಅರ್ಜುನನಿಗೆ ಅಂಬಾರಿ ಕಟ್ಟುವ ಕಾರ್ಯ ಆರಂಭ..

ಮೈಸೂರು,ಅ,8,2019(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವದ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು, ಕ್ಯಾಪ್ಟನ್ ಅರ್ಜುನನಿಗೆ ಚಿನ್ನದ ಅಂಬಾರಿ ಕಟ್ಟುವ ಕಾರ್ಯ ನಡೆಯುತ್ತಿದೆ.

ಮೈಸೂರು ಅರಮನೆ ಆವರಣದಲ್ಲಿ ಅರ್ಜುನನಿಗೆ  ಸಿಬ್ಬಂದಿಗಳು ಅಂಬಾರಿ ಕಟ್ಟುತ್ತಿದ್ದಾರೆ. ಅಂಬಾರಿ ಹೊರಲು ಅರ್ಜುನ ಸಿದ್ಧನಾಗಿ ನಿಂತಿದ್ದು ಕೆಲವೇ ಕ್ಷಣಗಳಲ್ಲಿ ಜಂಬೂ ಸವಾರಿ ಮೆರವಣಿಗೆ ಆರಂಭವಾಗಲಿದೆ. ಅರ್ಜುನ ಹೊರುವ ಚಿನ್ನದ ಅಂಬಾರಿಯಲ್ಲಿ ಪ್ರತಿಷ್ಟಾಪಿತವಾದ ತಾಯಿ ಚಾಮುಂಡೇಶ್ವರಿಗೆ ಪುಷ್ಪಾರ್ಚನೆ ಮಾಡುವ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ಜಂಬೂ ಸವಾರಿ ಮೆರವಣಿಗೆಗೆ ಚಾಲನೆ ನೀಡಲಿದ್ದಾರೆ.

750 ಕೆಜಿ ತೂಕದ ಅಂಬಾರಿ ಹೊತ್ತು ಅರ್ಜುನ ಸಾಗಲಿದ್ದು ಅರ್ಜುನನಿಗೆ 13 ಆನೆಗಳು ಸಾಥ್ ನೀಡಲಿವೆ.

Key words: mysore dasara-2019- arjuna- ambari-jamboo ride