Saturday, September 19, 2026

BDA Apartments

ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರರಿಂದ ಸ್ಧಳ...
Home Front Page ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರರಿಂದ ಸ್ಧಳ ಪರಿಶೀಲನೆ

ಮೈಸೂರು ದಸರಾ ಏರ್ ಶೋ ಆಯೋಜನೆ: ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರರಿಂದ ಸ್ಧಳ ಪರಿಶೀಲನೆ

ಮೈಸೂರು,ಅಕ್ಟೋಬರ್,6,2023(www.justkannada.in): ವಿಶ್ವವಿಖ್ಯಾತ ಮೈಸೂರು ದಸರಾದಲ್ಲಿ ಜನರನ್ನು ಆಕರ್ಷಿಸುವ ಏರ್‌ ಶೋ ಆಯೋಜನೆಗೆ ಅನುಮತಿ ನೀಡುವಂತೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಕೇಂದ್ರ ಸರ್ಕಾರವನ್ನು ಕೋರಿದ್ದರು.

ಈ ಸಂಬಂಧ ಏರ್ ಶೋ ನಡೆಸಲು  ಕೇಂದ್ರ ಸರ್ಕಾರ ಅನುಮತಿ ನೀಡಿದ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಧಿಕಾರಿ ಡಾ ಕೆ.ವಿ.ರಾಜೇಂದ್ರ ಅವರು ಬನ್ನಿಮಂಟಪದ ಮೈದಾನಕ್ಕೆ ಭೇಟಿ ನೀಡಿ ಸ್ಧಳ ಹಾಗೂ ಏರ್ ಶೋ ನಡೆಸಲು ಬೇಕಾದ ರೂಪುರೇಷೆಗಳನ್ನು ಪರಿಶೀಲನೆ ನಡೆಸಿದರು.ಮೈಸೂರು ದಸರಾ ಏರ್ ಶೋ ಆಯೋಜನೆ MYSORE-DASARA (1) MYSORE DASARA 1

ಈ ಸಂದರ್ಭದಲ್ಲಿ ಮೈಸೂರು ಏರ್ ಬೇಸ್ಡ್ ಗ್ರೂಪ್ ಕ್ಯಾಪ್ಟನ್ ಡಿ.ಕೆ.ಹೋಜಾ ಅವರೊಂದಿಗೆ ಪರಿಶೀಲನೆ ನಡೆಸಿದ ಜಿಲ್ಲಾಧಿಕಾರಿ ಡಾ.ಕೆ.ವಿ ರಾಜೇಂದ್ರ ಏರ್ ಶೋ ನಡೆಸುವ ಸ್ಧಳ  ದಿನಾಂಕ ಹಾಗೂ ಸಮಯ ಕುರಿತು ಚರ್ಚೆ ನಡೆಸಿದರು.

Key words: Mysore Dasara -Air Show- Inspection DC-Dr KV Rajendra