ಮೈಸೂರು,ಸೆಪ್ಟಂಬರ್,2,2025 (www.justkannada.in): ನಾಡಹಬ್ಬ ಮೈಸೂರು ದಸರಾ ಮಹೋತ್ಸವ ಉದ್ಘಾಟಕರಾಗಿ ಆಯ್ಕೆಯಾಗಿರುವ ಸಾಹಿತಿ ಭಾನು ಮುಷ್ತಾಕ್ ಅವರಿಗೆ ನಾಳೆ ಮೈಸೂರು ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ.
ನಾಳೆ ಸಂಜೆ 4 ಗಂಟೆಗೆ ಹಾಸನದಲ್ಲಿರುವ ಸಾಹಿತಿ ಭಾನು ಮುಷ್ತಾಕ್ ಅವರ ಸ್ವಗೃಹಕ್ಕೆ ತೆರಳಿ ಸರ್ಕಾರದ ಪರವಾಗಿ ಜಿಲ್ಲಾಡಳಿತ ಅಧಿಕೃತ ಆಹ್ವಾನ ನೀಡಲಿದೆ. ಈ ಕುರಿತು ಜಿಲ್ಲಾಡಳಿತ ಪ್ರಕಟಣೆ ಹೊರಡಿಸಿದ್ದು, ನಾಳೆ ಅಧಿಕೃತ ಆಹ್ವಾನ ನೀಡಲು ಸಿದ್ಧತೆ ನಡೆಸಿದೆ.
ಸೆಪ್ಟಂಬರ್ 22ರಂದು ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಮೈಸೂರು ದಸರಾ ಮಹೋತ್ಸವವನ್ನು ಸಾಹಿತಿ ಬಾನು ಮುಷ್ತಾಕ್ ಅವರು ಉದ್ಗಾಟಿಸಲಿದ್ದಾರೆ.
Key words: inaugurate, Mysore Dasara, Banu Mushtaq, Official invitation, tomorrow