ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ ಆಚರಣೆಗೆ ಚಿಂತನೆ- ಸಚಿವ ಹೆಚ್.ಸಿ.ಮಹದೇವಪ್ಪ

ಮೈಸೂರು,ಜುಲೈ,29,2023(www.justkannada.in): ಈ ಬಾರಿ ಅದ್ಧೂರಿಯಾಗಿ ಮೈಸೂರು ದಸರಾ  ಮಹೋತ್ಸವ ಆಚರಿಸಲು ಚಿಂತನೆ ನಡೆಸಲಾಗಿದೆ ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ.ಮಹದೇವಪ್ಪ ತಿಳಿಸಿದರು.

ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವ ನಡೆಸುವ ವಿಚಾರಕ್ಕೆ ಸಂಬಂಧಿಸಿದಂತೆ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಸಚಿವ ಹೆಚ್.ಸಿ.ಮಹದೇವಪ್ಪ,  ಈ ಬಾರಿ ಅದ್ಧೂರಿಯಾಗಿ ದಸರಾ ಮಹೋತ್ಸವ ಆಚರಿಸಲು ಚಿಂತನೆ ನಡೆದಿದೆ. ಈ ಹಿಂದೆ ಕೊವಿಡ್​​ನಿಂದ ಜನ ಸಂಕಷ್ಟಕ್ಕೆ ಸಿಲುಕಿದ್ದರು. ಈಗ ರಾಜ್ಯ ಸುಭಿಕ್ಷವಾಗಿದೆ, ಹೊಸ ಸರ್ಕಾರ ಬಂದಿದೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದೆ. ಮೈಸೂರು ಸಂಸ್ಕೃತಿ, ರಾಜಪರಂಪರೆ ಉಳಿಸಿಕೊಂಡು ದಸರಾ ಆಚರಣೆ ಮಾಡಲಾಗುತ್ತದೆ. ದಸರಾ ಉನ್ನತಮಟ್ಟ ಸಮಿತಿ ಸಭೆಯಲ್ಲಿ ಈ ಬಗ್ಗೆ ಚರ್ಚಿಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ತಿಳಿಸಿದರು.

ಜುಲೈ 31 ರಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ದಸರಾ ಉನ್ನತ ಮಟ್ಟದ ಸಭೆ ನಡೆಯಲಿದೆ.

Key words: Mysore Dasara- celebrations –grandly- Minister- HC Mahadevappa