ಮೈಸೂರು ದಸರಾ: ಅರಮನೆ ತಲುಪಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿಗೆ ಪೂರ್ಣಕುಂಭ ಸ್ವಾಗತ.

ಮೈಸೂರು,ಅಕ್ಟೋಬರ್,15,2021(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ಸಿದ್ಧತೆಗಳು ನಡೆಯುತ್ತಿವೆ. ಈ ಮಧ್ಯೆ ಚಾಮುಂಡಿ ಬೆಟ್ಟದಿಂದ ಬಂದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಮೆರವಣಿಗೆ ಅರಮನೆ ತಲುಪಿತು.

ಅಂಬಾರಿಯಲ್ಲಿ ಸಾಗುವ ಉತ್ಸವ ಮೂರ್ತಿಯನ್ನು ಅರಮನೆಗೆ ಇದೇ ಮೊದಲ ಬಾರಿಗೆ ಮೆರವಣಿಗೆ ಮೂಲಕ ಕರೆತರಲಾಯಿತು. ದೇವಸ್ಥಾನದ ಮುಂಭಾಗದಲ್ಲಿ ಅಲಂಕೃತ ವಾಹನದಲ್ಲಿದ್ದ ಉತ್ಸವ ಮೂರ್ತಿಗೆ ಸಚಿವ ಸೋಮಶೇಖರ್ ಅವರು ಪೂಜೆ ಸಲ್ಲಿಸಿದ ಬಳಿಕ ಮಂಗಳವಾದ್ಯದೊಂದಿಗೆ ಉತ್ಸವ ಮೂರ್ತಿಯೊಂದಿಗೆ ದೇವಸ್ಥಾನದ ಸುತ್ತ ಪ್ರದಕ್ಷಿಣೆ ಹಾಕಿದರು.

ಮೆರವಣಿಗೆ ಮೂಲಕ ಸಾಗಿದ ತಾಯಿ ಚಾಮುಂಡೇಶ್ವರಿ ಉತ್ಸವ ಮೂರ್ತಿ ಅರಮನೆಗೆ ತಲುಪಿದ್ದು ಅರಮನೆಯಲ್ಲಿ ನಾದಸ್ವರ ಡೊಳ್ಳು, ನಗಾರಿಯೊಂದಿಗೆ ಉತ್ಸವ ಮೂರ್ತಿಗೆ ಪೂರ್ಣಕುಂಭ ಸ್ವಾಗತ ಕೋರಲಾಯಿತು.

Key words: Mysore Dasara- Chamundeshwari –welcome- mysore-palace