ಮೈಸೂರು ದಸರಾ: ನಂದಿಧ್ವಜಕ್ಕೆ ಪೂಜೆ ಸಲ್ಲಿಸಿದ ಸಿಎಂ ಸಿದ್ದರಾಮಯ್ಯ

ಮೈಸೂರು,ಅಕ್ಟೋಬರ್,2,2025 (www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಜಂಬೂ ಸವಾರಿ ಮೆರವಣಿಗೆಗೆ ಕ್ಷಣಗಣನೆ ಆರಂಭವಾಗಿದ್ದು ಸಕಲ ಸಿದ್ದತೆ ನಡೆಯುತ್ತಿದೆ. ಈ ನಡುವೆ ಸಂಪ್ರದಾಯದಂತೆ ಸಿಎಂ ಸಿದ್ದರಾಮಯ್ಯ ನಂದಿಧ್ವಜಕ್ಕೆ ಪೂಜೆ ನೆರವೇರಿಸಿದ್ದಾರೆ.

ಮೈಸೂರು ಅರಮನೆಯ ಬಲರಾಮ ದ್ವಾರದಲ್ಲಿ ಶುಭ ಧನುರ್ ಲಗ್ನದಲ್ಲಿ ಸಿಎಂ ಸಿದ್ದರಾಮಯ್ಯ ಇಡುಗಾಯಿ ಒಡೆದು  ನಂದಿಧ್ವಜಕ್ಕೆ ಪೂಜೆ ಸಲ್ಲಿಕೆ ಮಾಡಿದರು. ಈ ವೇಳೆ ಡಿಸಿಎಂ ಡಿಕೆ ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಹೆಚ್.ಸಿ ಮಹದೇವಪ್ಪ, ಶಾಸಕರಾದ ತನ್ವೀರ್ ಸೇಠ್, ಹರೀಶ್ ಗೌಡ ಮತ್ತಿತರರು ಉಪಸ್ಥಿತರಿದ್ದರು.

ನಂದಿಧ್ವಜಕ್ಕೆ ಪೂಜೆ ಸಲ್ಲಿಕೆ ಜಂಬೂ ಸವಾರಿ ಮೆರವಣಿಗೆ ಆರಂಭವಾಗಲಿದ್ದು ಸಂಜೆ 4:42 ರಿಂದ 5:06ರ ವೇಳೆಗೆ ಸಿಎಂ ಸಿದ್ದರಾಮಯ್ಯ ಜಂಬೂಸವಾರಿಗೆ ಚಾಲನೆ ನೀಡಲಿದ್ದಾರೆ.

Key words: Mysore Dasara, CM Siddaramaiah, Nandi dwaja,