Thursday, August 13, 2026

BDA Apartments

Home Front Page ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ದಸರಾ ಆಚರಣೆಗೆ ನಿರ್ಧಾರ – ಸಂಪೂರ್ಣ ಮಾಹಿತಿ ನೀಡಿದ...

ಈ ಬಾರಿ 11 ದಿನಗಳ ಕಾಲ ವಿಜೃಂಭಣೆಯಿಂದ ದಸರಾ ಆಚರಣೆಗೆ ನಿರ್ಧಾರ – ಸಂಪೂರ್ಣ ಮಾಹಿತಿ ನೀಡಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು,ಜೂನ್, 28,2025 (www.justkannada.in): ಈ ಬಾರಿ 9 ದಿನಗಳ ಬದಲು 11 ದಿನಗಳ ಕಾಲ ಮೈಸೂರು ದಸರಾ ಆಚರಣೆ ಮಾಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ನಾಡಹಬ್ಬ ಮೈಸೂರು ದಸರಾ-2025 ಆಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆ ನಂತರ ಮಾಧ್ಯಮಗಳ ಜೊತೆ ಮಾತನಾಡಿ ಮಾಹಿತಿ ಹಂಚಿಕೊಂಡ ಸಿಎಂ ಸಿದ್ದರಾಮಯ್ಯ, ಈ ಬಾರಿ ಅಧಿಕ ಪಂಚಮಿ ಬಂದಿರುವುದರಿಂದ 9 ದಿನಗಳ ಬದಲಾಗಿ 11 ದಿನಗಳು ದಸರಾ ಆಚರಣೆ ಮಾಡಲಾಗುತ್ತದೆ.  ಸೆಪ್ಟಂಬರ್ 22 ರಿಂದ ಅಕ್ಟೋಬರ್ 2ರವರೆಗೆ ಮೈಸೂರು ದಸರಾ ಉತ್ಸವ ನಡೆಯಲಿದ್ದು ಈ ಬಾರಿ 10 ಲಕ್ಷಕ್ಕೂ ಹೆಚ್ಚು ಜನ ಸೇರುವ ನಿರೀಕ್ಷೆ ಇದೆ ಎಂದರು.

ಸೆಪ್ಟಂಬರ್ 22 ರಂದು ಬೆಳಿಗ್ಗೆ 10.10 ಗಂಟೆಗೆ ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ದಸರಾ ಉದ್ಘಾಟನೆ ನಡೆಯಲಿದೆ. ಅಕ್ಟೋಬರ್ 2 ರಂದು ಜಂಬೂಸವಾರಿ  ನಡೆಯಲಿದ್ದು ಅಂದು ಸಂಜೆ 4.42ರಿಂದ 5.06ಕ್ಕೆ ಜಂಬೂಸವಾರಿ ಮೆರವಣಿಗೆಗೆ ಚಾಲನೆ ನೀಡಲಾಗುತ್ತದೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.

ಇಂದು ನಡೆದ ದಸರಾ ಪೂರ್ವಭಾವಿ ಸಭೆಯಲ್ಲಿ ಸಚಿವರಾದ ಎಚ್.ಸಿ.ಮಹದೇವಪ್ಪ, ಕೆ.ಜೆ.ಜಾರ್ಜ್‌, ಶಿವರಾಜ ತಂಗಡಗಿ, ಕೆ. ವೆಂಕಟೇಶ್, ಅಪರ ಮುಖ್ಯ ಕಾರ್ಯದರ್ಶಿ ಗೌರವ ಗುಪ್ತಾ, ಮುಖ್ಯಮಂತ್ರಿ ಅವರ ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್, ಜಿ.ಟಿ.ದೇವೇಗೌಡ, ರಮೇಶ್‌ ಬಂಡಿಸಿದ್ದೇಗೌಡ, ಪುಟ್ಟರಂಗಶೆಟ್ಟಿ,, ತನ್ವೀರ್‌ ಸೇಠ್, ಡಾ.ಯತೀಂದ್ರ ಎಸ್‌, ಡಾ.ಡಿ.ತಿಮ್ಮಯ್ಯ, ಅನಿಲ್‌ ಕುಮಾರ್, ಎ.ಆರ್.ಕೃಷ್ಣಮೂರ್ತಿ, ಮಧು ಜಿ ಮಾದೇಗೌಡ, ಕೆ.ಹರೀಶ್‌ ಗೌಡ, ದರ್ಶನ್‌ ಧ್ರುವನಾರಾಯಣ, ಡಾ.ಮಾನಸ, ಪುಷ್ಪಾ ಅಮರನಾಥ್, ಅಯೂಬ್‌ ಖಾನ್ ಮತ್ತಿತರರು ಉಪಸ್ಥಿತರಿದ್ದರು.vtu

Key words: celebrate, Mysore Dasar-2025, 11 days – CM Siddaramaiah