ಮೈಸೂರು,ಆಗಸ್ಟ್,19,2025 (www.justkannada.in): ಸೆಪ್ಟಂಬರ್ 22 ರಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ನಡೆಯಲಿದ್ದು ಈ ಹಿನ್ನೆಲೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳನ್ನ ನೀಡಲು ಕಲಾವಿದರಿಂದ/ಕಲಾತಂಡಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಈ ಕುರಿತು ಪ್ರಕಟಣೆ ಹೊರಡಿಸಿರುವ ಮೈಸೂರು ದಸರಾ ಮಹೋತ್ಸವ 2025 ಸಾಂಸ್ಕೃತಿಕ ಉಪಸಮಿತಿಯ ಕಾರ್ಯರ್ಶಿ ಡಾ.ಎಂ.ಡಿ ಸುದರ್ಶನ್, 2025-26ನೇ ಸಾಲಿನಲ್ಲಿ ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವವನ್ನು ದಿನಾಂಕ: 22-09-2025 ರಿಂದ 02-10-2025ರ ವರೆಗೆ ವಿಜೃಂಭಣೆಯಿಂದ ಆಚರಿಸಲು ತೀರ್ಮಾನಿಸಲಾಗಿದೆ. ಈ ಸಂಬಂಧ ಸಾಂಸ್ಕೃತಿಕ ಉಪಸಮಿತಿಯಿಂದ ನವರಾತ್ರಿ ದಿನಾಂಕ: 22-09-2025 ರಿಂದ 30-09-2025ರ ವರೆಗೆ ವಿವಿಧ ಕಲಾಪ್ರಕಾರಗಳ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಹಾಗೂ ಇತರೆ ವೇದಿಕೆಗಳಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ.
ಸಾಂಸ್ಕೃತಿಕ ಕಾರ್ಯಕ್ರಮ ನೀಡಲು ಕಲಾವಿದರಿಂದ/ಕಲಾತಂಡಗಳಿಂದ ದಿನಾಂಕ: 20-08-2025 ರಿಂದ ಅರ್ಜಿ ಆಹ್ವಾನಿಸಿದ್ದು, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-09-2025 ಆಗಿರುತ್ತದೆ. ಸದರಿ ಅರ್ಜಿಗಳನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕರ್ನಾಟಕ ಕಲಾಮಂದಿರ, ವಿನೋಬಾ ರಸ್ತೆ, ಮೈಸೂರು-570005 ಇಲ್ಲಿಗೆ ನೇರವಾಗಿ ಅಥವಾ ಅಂಚೆ ಮೂಲಕ ಅರ್ಜಿ ಸಲ್ಲಿಸಬಹುದಾಗಿದ್ದು, ಮಿಂಚಂಚೆ ಮೂಲಕವು ccdasara23@gamail.com ವಿಳಾಸಕ್ಕೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿ ದೂರವಾಣಿ ಸಂಖ್ಯೆ: 0821-2513225ಗೆ ಸಂಪರ್ಕಿಸಲು ತಿಳಿಸಿದೆ. ಹಾಗೂ ಕಲಾವಿದರಿಗೆ ಕಾರ್ಯಕ್ರಮ ಕೊಡಿಸುವುದಾಗಿ ಯಾವುದೇ ಮಧ್ಯವರ್ತಿಗಳು ಸಂಪರ್ಕಿಸಿ ಹಣದ ಬೇಡಿಕೆ ಇಟ್ಟಲ್ಲಿ ತಕ್ಷಣ ಮಾಹಿತಿ ಸಮೇತ ಮೇಲ್ಕಾಣಿಸಿದ ಸಹಾಯಕ ನಿರ್ದೇಶಕರ ಕಚೇರಿಗೆ ದೂರು ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
Key words: Mysore Dasara, Applications, invited, cultural programs