ಮೈಸೂರು ದಸರಾ: ಅರಮನೆ ಪ್ರವೇಶಿಸಿದ ಗಜಪಡೆಗೆ ಅದ‍್ಧೂರಿ ಸ್ವಾಗತ.

ಮೈಸೂರು,ಸೆಪ್ಟಂಬರ್,5,2023(www.justkannada.in): ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಜ್ಜಾಗುತ್ತಿದ್ದು ಈ ನಡುವೆ  ಇಂದು ಅರಮನೆ ಪ್ರವೇಶಿಸಿದ  ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ಕೋರಲಾಯಿತು.

ಮೈಸೂರು ಅರಮನೆ ಮಂಡಳಿ ವತಿಯಿಂದ ಗಜಪಡೆಗೆ ಸಾಂಪ್ರದಾಯಿಕ ಸ್ವಾಗತ ದೊರೆಯಿತು. ಇಂದು ಮಧ್ಯಾಹ್ನ 12.01ಕ್ಕೆ ಕ್ಯಾಪ್ಟನ್ ಅಭಿಮನ್ಯು ನೇತೃತ್ವದ ಗಜಪಡೆಯ 9 ಆನೆಗಳು ಅರಮನೆಗೆ ಆಗಮಿಸಿದವು. ನಂತರ ಅಭಿಜಿನ್ ಲಗ್ನದಲ್ಲಿ ಅರಮನೆಯ ಜಯಮಾರ್ತಾಂಡ ದ್ವಾರದಲ್ಲಿ ಆನೆಗಳಿಗೆ ಸಾಂಪ್ರದಾಯಿಕ ಪೂಜೆ ಸಲ್ಲಿಸಲಾಯಿತು.

ಕಾರ್ಯಕ್ರಮದಲ್ಲಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್.ಸಿ ಮಹದೇವಪ್ಪ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ, ಪೊಲೀಸ್ ಕಮಿಷನರ್ ರಮೇಶ್ ಬಾನೋತ್ ಸೇರಿ ಹಲವರು ಉಪಸ್ಥಿತರಿದ್ದರು.

Key words: Mysore Dasara- Gajapade -entered – palace – grand welcome.