ಇಂದು ದಸರಾ ಉನ್ನತ ಮಟ್ಟದ ಸಭೆ: ದಸರಾ ರೂಪುರೇಷೆಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ…

ಮೈಸೂರು , ಸೆಪ್ಟಂಬರ್, 8,2020(www.justkannada.in):  ಕೊರೋನಾ ಮಹಾಮಾರಿ ಅಟ್ಟಹಾಸದ ನಡುವೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಆಚರಣೆ ಹೇಗಿರಲಿದೆ ಎಂಬ ಪ್ರಶ್ನೆಗೆ ಇಂದು ಉತ್ತರ ಸಿಗಲಿದೆ. ಇಂದು ದಸರಾ ಉನ್ನತ ಮಟ್ಟದ ಸಭೆ ನಡೆಯಲಿದ್ದು ನಾಡಹಬ್ಬ ಆಚರಣೆಯ ರೂಪುರೇಷೆಗಳ ಬಗ್ಗೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳಲಿದ್ದಾರೆ.jk-logo-justkannada-logo

ಬೆಂಗಳೂರಿನ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಮುಖ್ಯಮಂತ್ರಿ ಬಿ‌. ಎಸ್. ಯಡಿಯೂರಪ್ಪ ಅವರ ಅಧ್ಯಕ್ಷತೆಯಲ್ಲಿ ದಸರಾ ಮಹೋತ್ಸವದ ಉನ್ನತಮಟ್ಟದ ಸಭೆ ನಡೆಯಲಿದ್ದು, ಈ ಬಾರಿಯ ಮೈಸೂರು ದಸರಾ ಮಹೋತ್ಸವ ಸರಳವೋ, ಸಾಂಪ್ರದಾಯಿಕವೋ ಅಥವಾ ಅರಮನೆಗೆ ಸೀಮಿತವೋ ಎಂಬ ಬಗ್ಗೆ ತೀರ್ಮಾನ ಮಾಡಲಿದ್ದಾರೆ.

ದಸರಾ ಉನ್ನತಮಟ್ಟದ ಸಭೆಯಲ್ಲಿ  ಜಿಲ್ಲಾ ಉಸ್ತುವಾರಿ ಸಚಿವ ಎಸ್. ಟಿ. ಸೋಮಶೇಖರ್, ಪ್ರವಾಸೋದ್ಯಮ ಸಚಿವ ಸಿ. ಟಿ. ರವಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ಚಾಮರಾಜನಗರ ನಗರ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್, ಸಂಸದ ಪ್ರತಾಪ್ ಸಿಂಹ, ಮೈಸೂರು ಜಿಲ್ಲೆಯ ಎಲ್ಲಾ ಶಾಸಕರು, ಮೈಸೂರು ಮೇಯರ್, ಜಿಲ್ಲಾ ಪಂಚಾಯ್ತಿ ಅಧ್ಯಕ್ಷರು, ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ, ಮಹಾನಗರ ಪಾಲಿಕೆ ಆಯುಕ್ತರು ಸೇರಿದಂತೆ ಸರ್ಕಾರದ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ.mysore-dasara-high-level-meeting-today

ಸಭೆಯಲ್ಲಿ ದಸರಾ ರೂಪುರೇಷೆಗಳ ಬಗ್ಗೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ. ಈ ಬಾರಿ ದಸರಾ ಉದ್ಘಾಟಕರು, ಈ ಬಾರಿಯ ದಸರಾ ಬಜೆಟ್‍, ದಸರಾದಲ್ಲಿ ಎಷ್ಟು ಆನೆಗಳು ಇರಬೇಕು ಎಂಬ ಬಗ್ಗೆ ಇಂದು ನಡೆಯುವ ಸಭೆಯಲ್ಲಿ ಅಂತಿಮ ನಿರ್ಧಾರ ಕೈಗೊಳ್ಳಲಿದ್ದಾರೆ.

Key words: mysore- Dasara- high-level- meeting- today.