ಅರಮನೆಗೆ ಮಾತ್ರ ಈ ಬಾರಿ ಮೈಸೂರು ದಸರಾ ಸೀಮಿತ: ಹಲವು ನಿರ್ಧಾರ ಕೈಗೊಂಡ ಉನ್ನತ ಮಟ್ಟದ ಸಮಿತಿ ಸಭೆ..

ಬೆಂಗಳೂರು,ಸೆಪ್ಟಂಬರ್,8,2020(www.justkannada.in): ರಾಜ್ಯದಲ್ಲಿ  ಕೊರೋನಾ ಮಹಾಮಾರಿ ಹರಡುತ್ತಿರುವ ಹಿನ್ನೆಲೆ ಈ ಬಾರಿ ವಿಶ್ವ ವಿಖ್ಯಾತ ಮೈಸೂರು ದಸರಾ ಮಹೋತ್ಸವ ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಸೀಮಿತವಾಗಿ ಆಚರಿಸಲು ಉನ್ನತ ಮಟ್ಟದ ಸಮಿತಿ ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಗಿದೆ.jk-logo-justkannada-logo

ದಸರಾ ಆಚರಣೆ ಕುರಿತು ಇಂದು ಸಿಎಂ ಬಿಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಉನ್ನತ ಮಟ್ಟದ ಸಮಿತಿ ಸಭೆ ನಡೆಯಿತು. ಚಾಮುಂಡಿ ಬೆಟ್ಟ, ಅರಮನೆಗೆ ಮಾತ್ರ ಈ ಬಾರಿ ದಸರಾ ಸೀಮಿತಿವಾಗಿರಬೇಕು. ಅರಮನೆಯಲ್ಲಿ ಸಂಪ್ರದಾಯದ ಕಾರ್ಯಕ್ರಮಗಳು ಇರುತ್ತೆ. ಯುವ ದಸರಾ, ವಸ್ತು ಪ್ರದರ್ಶನ, ಫಲ ಪುಷ್ಪ ಪ್ರದರ್ಶನ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಸದೇ ಇರಲು ಸಭೆಯಲ್ಲಿ ನಿರ್ಧಾರ ಮಾಡಲಾಗಿದೆ.

ಹಾಗಯೇ ಈ ಬಾರಿ ಅರಮನೆ ಒಳಗೆ ಮಾತ್ರ ಜಂಬೂ ಸವಾರಿ ನಡೆಸಲು ತೀರ್ಮಾನಿಸಲಾಗಿದ್ದು, ದಸರಾಗೆ ಪ್ರಾರಂಭಿಕವಾಗಿ 10 ಕೋಟಿ ಬಿಡುಗಡೆಗೆ ನಿರ್ಧಾರ ಮಾಡಲಾಗಿದೆ. ಈ ಬಾರಿ ಕೊರೊನಾ ವಾರಿಯರ್ಸ್ ಗಳಿಂದ ದಸರಾ ಉದ್ಘಾಟನೆ ಮಾಡಿಸುವ ಸಾಧ್ಯತೆ ಇದೆ. ಇನ್ನು ಮೈಸೂರು ದಸರಾದಲ್ಲಿ ಚೀನಿ ವಸ್ತುಗಳಿಗೆ ಸಂಪೂರ್ಣ ನಿಷೇಧ ವಿಧಿಸಲು ತೀರ್ಮಾನಿಸಲಾಗಿದೆ. mysore –dasara-high –power –meeting- Palace-many decisions.

ಹಾಗೆಯೇ ಈ ಬಾರಿ ದಸರಾಗೆ ಆನೆಗಳ ಸಂಖ್ಯೆಯಲ್ಲಿ ಇಳಿಕೆ ಮಾಡಲು ಸಮಿತಿಯಲ್ಲಿ ಚರ್ಚೆ ಮಾಡಲಾಗಿದೆ. ದಸರಾ ಮಹೋತ್ಸವಕ್ಕೆ 10ಕ್ಕೂ ಹೆಚ್ಚು ಆನೆಗಳು ಭಾಗಿಯಾಗುತ್ತಿದ್ದವು. ಈ ಬಾರಿ ಕೊರೋನಾ ಹಿನ್ನೆಲೆ ಆನೆಗಳ ಸಂಖ್ಯೆ ಕಡಿಮೆ ಮಾಡಲು ಚರ್ಚೆ ನಡೆಸಲಾಗಿದೆ.

Key words: mysore –dasara-high –power –meeting- Palace-many decisions.