ಮೈಸೂರು ದಸರಾ ಜಂಬೂಸವಾರಿಗೆ ದಿನಗಣನೆ: ಇಂದು ಗಜಪಡೆಗೆ ತಾಲೀಮು ರದ್ದು.

ಮೈಸೂರು,ಅಕ್ಟೋಬರ್,6,2021(www.justkannada.in) : ವಿಶ್ವ ವಿಖ್ಯಾತ ಮೈಸೂರು ದಸರಾ ಪ್ರಮುಖ ಆಕರ್ಷಣೆ ಜಂಬೂಸವಾರಿಗೆ ದಿನಗಣನೆ ಆರಂಭವಾಗಿದ್ದು, ಇಂದು ಮಹಾಲಯ ಅಮಾವಾಸ್ಯೆ.ದಸರಾ ಗಜಪಡೆಗೆ ತಾಲೀಮು ರದ್ದು ಮಾಡಲಾಗಿದೆ.

ದಸರಾ ಪ್ರಯುಕ್ತ ಅರಮನೆ ಆವರಣದಲ್ಲಿ ಪ್ರತಿದಿನ ಬೆಳಗ್ಗೆ ಮತ್ತು ಸಂಜೆ ಆನೆಗಳಿಗೆ ತಾಲೀಮು ನಡೆಯುತ್ತಿತ್ತು. ಇಂದು ಮಹಾಲಯ ಅಮವಾಸ್ಯೆಯ ಹಿನ್ನೆಲೆಯಲ್ಲಿ ಗಜಪಡೆಯ ತಾಲೀಮು ರದ್ದು ಮಾಡಲಾಗಿದೆ.

ಅರಮನೆ ಆವರಣದಲ್ಲಿ ಆನೆಗಳಿಗೆ  ವಿಶ್ರಾಂತಿ ನೀಡಲಾಗಿದ್ದು, ಅರಮನೆ ಆವರಣದ ಒಳಗೆ ಒಂದೆರಡು ಸುತ್ತು ವಾಕಿಂಗ್ ಮಾಡಿದ ಗಜಪಡೆ ನಂತರ ವಿಶ್ರಾಂತಿಗೆ ಜಾರಿವೆ. ಪ್ರತಿ ಅಮಾವಾಸ್ಯೆಯ ಸಮಯದಲ್ಲಿ ಆನೆಗಳಿಗೆ ತಾಲೀಮು ನಡೆಸುವುದಿಲ್ಲ. ನಾಳೆ ಮೈಸೂರು ದಸರಾ ಉದ್ಘಾಟನೆಯಾಗಲಿದ್ದು ಅಕ್ಟೋಬರ್ 15 ರಂದು ಜಂಬೂ ಸವಾರಿ ಮೆರವಣಿಗೆ ಮೂಲಕ ದಸರಾ ಅಂತ್ಯಗೊಳ್ಳಲಿದೆ.

Key words: Mysore Dasara-Jambusavari- Cancel – workout –dasara gajapade