Friday, August 28, 2026

BDA Apartments

Home Front Page ಗಜಪಡೆ ಆನೆಗಳಿಗೆ ಪೂಜೆ ಸಲ್ಲಿಕೆ: ಮಾವುತರು ಹಾಗೂ ಕಾವಾಡಿಗರಿಗೆ ಗೌರವಧನ ವಿತರಿಸಿದ ಸಚಿವ ಎಸ್.ಟಿ.ಸೋಮಶೇಖರ್

ಗಜಪಡೆ ಆನೆಗಳಿಗೆ ಪೂಜೆ ಸಲ್ಲಿಕೆ: ಮಾವುತರು ಹಾಗೂ ಕಾವಾಡಿಗರಿಗೆ ಗೌರವಧನ ವಿತರಿಸಿದ ಸಚಿವ ಎಸ್.ಟಿ.ಸೋಮಶೇಖರ್

ಮೈಸೂರು,ಅಕ್ಟೋಬರ್.27,2020(www.justkannada.in): ನಾಡಹಬ್ಬ ದಸರಾದ ಜಂಬೂ ಸವಾರಿಯನ್ನು ಅಚ್ಚುಕಟ್ಟಾಗಿ ಯಶಸ್ವಿಗೊಳಿಸಿದ ಗಜಪಡೆಯ ಮಾವುತರು ಹಾಗೂ ಕಾವಾಡಿಗರಿಗೆ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಅವರು ಗೌರವ ಧನ ವಿತರಿಸಿದರು.mysore-dasara-mavutha-kavadiga-minister-st-somashekhar-honor-money

ಮಂಗಳವಾರ ಶ್ರೀ ಕೋಡಿ ಸೋಮೇಶ್ವರ ದೇವಾಲಯದ ಮುಂಭಾಗ ಅಭಿಮನ್ಯು ನೇತೃತ್ವದ ವಿಕ್ರಮ, ಗೋಪಿ, ವಿಜಯ, ಕಾವೇರಿ ಆನೆಗಳಿಗೆ ಪೂಜಾ ಕಾರ್ಯ ನೆರವೇರಿಸಿ, ಕಬ್ಬು, ಹಣ್ಣುಬೆಲ್ಲ ನೀಡಿದರು.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ  ಸಚಿವ ಎಸ್.ಟಿ ಸೋಮಶೇಖರ್, ಮೊದಲ ಬಾರಿಗೆ ಅಭಿಮನ್ಯು ಆನೆಯು ಚಿನ್ನದ ಅಂಬಾರಿ ಹೊತ್ತು ಸಾಗಿ ಯಶಸ್ವಿಗೊಳಿಸಿದೆ. ಸಂಪ್ರದಾಯದಂತೆ ನಾಡಹಬ್ಬ ದಸರಾ ಮಹೋತ್ಸವದ ಜಂಬೂ ಸವಾರಿಯಲ್ಲಿ ಭಾಗವಹಿಸಿದ ಗಜಪಡೆಗೆ ಪೂಜೆ ಸಲ್ಲಿಸಿ, ಮಾವುತರು ಹಾಗೂ ಕಾವಾಡಿಗರಿಗೆ ಗೌರವ ಧನ ವಿತರಿಸಲಾಯಿತು ಎಂದರು.mysore-dasara-mavutha-kavadiga-minister-st-somashekhar-honor-money

ಮಾವುತರು ಹಾಗೂ ಕಾವಾಡಿಗರಿಗೆ ಗೌರವ ದನವಾಗಿ 10 ಸಾವಿರ ರೂ. ನೀಡಲಾಗಿದೆ. ಮುಂದಿನ ದಿನಗಳಲ್ಲಿ ಎಲ್ಲ ರೀತಿಯ ಸೌಲಭ್ಯ ನೀಡಲಾಗುವುದು ಎಂದು ಮಾಹಿತಿ ನೀಡಿದರು.

ಈ ಸಂದರ್ಭದಲ್ಲಿ ಶಾಸಕರಾದ ಎಸ್.ಎ.ರಾಮದಾಸ್, ಎಲ್.ನಾಗೇಂದ್ರ, ಮುಡಾ ಅಧ್ಯಕ್ಷ ಎಚ್.ವಿ.ರಾಜೀವ್, ಡಿಸಿಎಫ್ ಅಲೆಕ್ಸಾಂಡರ್, ಗಜಪಡೆಯ ವೈದ್ಯ ಡಾ.ನಾಗರಾಜ್ ಇತರರು ಉಪಸ್ಥಿತರಿದ್ದರು.

Key words: mysore dasara-mavutha-kavadiga- Minister-ST Somashekhar- Honor money