ಮೈಸೂರು ದಸರಾ : ಈ ದಿನಗಳಲ್ಲಿ ಸಾರ್ವಜನಿಕರಿಗೆ ಅರಮನೆ ಪ್ರವೇಶ ನಿರ್ಬಂಧ.

ಮೈಸೂರು,ಅಕ್ಟೋಬರ್,6,2023(www.justkannada.in): ಮೈಸೂರು ದಸರಾ ಮಹೋತ್ಸವಕ್ಕೆ ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದ್ದು, ದಸರಾ ವೇಳೆ ಅರಮನೆಯಲ್ಲಿ ಧಾರ್ಮಿಕ ಪೂಜಾ ಕೈಂಕರ್ಯ  ಹಿನ್ನೆಲೆ  ಆ ದಿನಗಳಲ್ಲಿ ಅರಮನೆ ಪ್ರವೇಶಕ್ಕೆ ಸಾರ್ವಜನಿಕರು, ಪ್ರವಾಸಿಗರಿಗೆ ನಿರ್ಬಂಧ ವಿಧಿಸಲಾಗಿದೆ.

09-10-2023 ರಂದು ಸಿಂಹಾಸನ ಜೋಡಣೆ ಹಿ‌ನ್ನೆಲೆ ಬೆಳಿಗ್ಗೆ 10 ರಿಂದ ಮಧ್ಯಾಹ್ನದವರೆಗೆ ಅರಮನೆಗೆ ಪ್ರವಾಸಿಗರ ನಿರ್ಬಂಧ ವಿಧಿಸಲಾಗಿದೆ. 15-10-2023 ರಂದು ಖಾಸಗಿ ದರ್ಬಾರ್ ಹಿನ್ನೆಲೆಯಲ್ಲಿ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕರಿಗೆ ನಿರ್ಬಂಧ, 23-10-2023 ರಂದು ಆಯುಧ ಪೂಜೆ ಹಿನ್ನೆಲೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಸಾರ್ವಜನಿಕರಿಗೆ ನಿಷೇಧ ಹೇರಲಾಗಿದೆ.

24-10-2023 ರಂದು ಜಂಬೂಸವಾರಿ ಹಿನ್ನೆಲೆ ಇಡೀ ದಿನ ಪ್ರವಾಸಿಗರಿಗೆ ಅರಮನೆ ಪ್ರವೇಶಕ್ಕೆ ನಿಷೇಧ( ಪಾಸ್ ಇದ್ದವರು ಅರಮನೆ ಅಂಗಳದಲ್ಲಿ ಜಂಬೂ ಸವಾರಿ ವೀಕ್ಷಣೆ ಮಾಡಬಹುದು), ಹಾಗೆಯೇ 8-11-2023ರಂದು ಸಿಂಹಾಸನ ವಿಸರ್ಜನೆ ಹಿ‌ನ್ನೆಲೆ ಬೆಳಿಗ್ಗೆ 10 ರಿಂದ ಮಧ್ಯಾಹ್ನ 2 ಗಂಟೆವರೆಗೆ ಅರಮನೆ  ಪ್ರವೇಶ  ನಿರ್ಬಂಧ ವಿಧಿಸಲಾಗಿದೆ ಎಂದು ಮೈಸೂರು ಅರಮನೆ ಆಡಳಿತ ಮಂಡಳಿ ಉಪ ನಿರ್ದೇಶಕ ಸುಬ್ರಹ್ಮಣ್ಯ ಮಾಹಿತಿ ನೀಡಿದ್ದಾರೆ.

Key words: Mysore Dasara – palace – closed – public