ದಸರಾ ಕ್ರೀಡಾಕೂಟ ಸ್ವರೂಪ ಬದಲಾವಣೆಗೆ ಚಿಂತನೆ- ಸಚಿವ ವಿ.ಸೋಮಣ್ಣ ಹೇಳಿಕೆ…

ಮೈಸೂರು, ಸೆ. 19 (www.justkannada.in):  ಮುಂದಿನ ದಿನಗಳಲ್ಲಿ ದಸರಾ ಕ್ರೀಡಾಕೂಟಕ್ಕೆ ರಾಜ್ಯ ಮಟ್ಟದ ಸ್ವರೂಪ ನೀಡಲಾಗುವುದು ಎಂದು , ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ವಿ. ಸೋಮಣ್ಣ ಅವರು ಇಂದು ತಿಳಿಸಿದರು.

ಜಿಲ್ಲಾ ಪಂಚಾಯಿತಿ ಹಾಗೂ ಯುವ ಸಬಲೀಕರಣ ಹಾಗೂ ಕ್ರೀಡಾ ಇಲಾಖೆ ವತಿಯಿಂದ ನಗರದ ಚಾಮುಂಡಿ ವಿಹಾರ ಕ್ರೀಡಾಂಗಣದಲ್ಲಿ ಅಯೋಜಿಸಿದ್ದ ಜಿಲ್ಲಾ ಮಟ್ಟದ ದಸರಾ ಕ್ರೀಡಾಕೂಟ ಉದ್ಘಾಟಿಸಿ ಸಚಿವ ವಿ. ಸೋಮಣ್ಣ ಮಾತನಾಡಿದರು.

ಗ್ರಾಮೀಣ ಭಾಗದ ಕ್ರೀಡಾಪಟುಗಳು ರಾಜ್ಯ ಮಟ್ಟದಲ್ಲಿ ಗುರುತಿಸಿಕೊಂಡು ಉನ್ನತ ಸಾಧನೆ ಮಾಡುವಂತಾಗಲು ದಸರಾ ಕ್ರೀಡಾಕೂಟವು ಉತ್ತಮ ವೇದಿಕೆಯಾಗಿದೆ. ಈ ಹಿನ್ನೆಲೆಯಲ್ಲಿ ಈ ದಸರಾ ಕ್ರೀಡಾಕೂಟವನ್ನು ರಾಜ್ಯ ಮಟ್ಟಕ್ಕೆ ವಿಸ್ತರಿಸಿ, ಆಧುನಿಕತೆಯ ಸ್ಪರ್ಷ ನೀಡಲು ಚಿಂತಿಸಲಾಗಿದೆ ಎಂದರು. ಕ್ರೀಡಾಪಟುಗಳು ಸೋಲು – ಗೆಲುವನ್ನು ಲೆಕ್ಕಿಸದೆ ಸ್ಪರ್ಧಾ ಮನೋಭಾವನೆಯಿಂದ ಕ್ರೀಡೆಗಳ ಲ್ಲಿ ಭಾಗವಹಿಸಬೇಕು ಎಂದು ಕಿವಿಮಾತು ಹೇಳಿದರು.

ಇದೇ ವೇಳೆ ಸಚಿವರು ನೆರೆದಿದ್ದ ಕ್ರೀಡಾಪಟುಗಳಿಂದ ಗೌರವ ವಂದನೆ ಸ್ವೀಕರಿಸಿದರು. ಮೇಯರ್ ಪುಷ್ಪಲತಾ ಜಗನ್ನಾಥ್, ಜಿಲ್ಲಾ ಪಂಚಾಯಿತಿ ಅಧ್ಯಕ್ಷೆ ಪರಿಮಳ ಶ್ಯಾಂ, ಜಿಲ್ಲಾಧಿಕಾರಿ ಅಭಿರಾಂ ಜಿ. ಶಂಕರ್, ಜಿಲ್ಲಾ ಪಂಚಾಯಿತಿ ಸಿಇಒ ಜ್ಯೋತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಪನಿರ್ದೇಶಕ ಸುರೇಶ್ ಈ ಸಂದರ್ಭದಲ್ಲಿ ಉಪಸ್ಠಿತರಿದ್ದರು.

Key words: mysore dasara- sports- format -thinking -Minister V. Somanna