ಮೈಸೂರು ದಸರಾ: ಯುವ ಸಂಭ್ರಮಕ್ಕೆ ಡೇಟ್ ಫಿಕ್ಸ್…..

ಮೈಸೂರು,ಸೆ,11,2019(www.justkannada.in): ವಿಶ್ವವಿಖ್ಯಾತ ನಾಡ ಹಬ್ಬ ಮೈಸೂರು ದಸರಾ ಮಹೋತ್ಸವಕ್ಕೆ ದಿನಗಣನೆ ಆರಂಭವಾಗಿದ್ದು, ಈ ನಡುವ ಯುವಕ ಯುವತಿಯರ ಮನ ತಣಿಸುವ ಯುವ ಸಂಭ್ರಮಕ್ಕೆ ಡೇಟ್ ಫಿಕ್ಸ್ ಆಗಿದೆ.

ಸೆ.17 ರಿಂದ 25 ರವರಗೆ 9 ದಿನಗಳ ಕಾಲ ನಗರದ ಗಂಗೋತ್ರಿ ಬಯಲು ರಂಗ ಮಂದಿರದಲ್ಲಿ ಯುವ ಸಂಭ್ರಮ ಕಾರ್ಯಕ್ರಮ ನಡೆಯಲಿದೆ. ಪ್ರವಾಸೋದ್ಯಮ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸಿ.ಟಿ.ರವಿ ಅವರು ಇಂದು ಯುವ ಸಂಭ್ರಮ, ಯುವ ದಸರಾ ಕಾರ್ಯಕ್ರಮದ ಫೋಸ್ಟರ್ ಬಿಡುಗಡೆ ಮಾಡಿದರು.

ಪ್ರತಿ ದಿನ ಸಂಜೆ 5:30 ರಿಂದ ನಡೆಯುವಯುವ ಸಂಭ್ರಮದಲ್ಲಿ  ಸಾಂಸ್ಕೃತಿಕ ಪ್ರದರ್ಶನ ಕಾರ್ಯಕ್ರಮ ನಡೆಯಲಿದೆ. ಈ ಬಾರಿ  ಉತ್ತರ ಕರ್ನಾಟಕ ಭಾಗದ ವಿದ್ಯಾರ್ಥಿಗಳಿಗೆ ಹೆಚ್ಚಿನ ಆದ್ಯತೆ ನೀಡಲಾಗಿದ್ದು, ದಸರೆಯ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ 278 ಕಾಲೇಜುಗಳು ಭಾಗಿಯಾಗಲಿವೆ.

ನಟ ಗೊಲ್ಡನ್ ಸ್ಟಾರ್ ಗಣೇಶ್ ಯುವ ಸಂಭ್ರಮ ಉದ್ಘಾಟಿಸಲಿದ್ದು, ಈ ಬಾರಿ ಕಿರು ನಾಟಕ, ಮೈಮ್ ಇತ್ಯಾದಿ ಕಲಾ ಪ್ರಕಾರಗಳಿಗೆ ಹೆಚ್ಚಿನ ಅವಕಾಶ ನೀಡಲಾಗಿದೆ. ಈ ಬಾರಿ ಪರಿಸರ ಸಂರಕ್ಷಣೆ, ರಾಷ್ಟ್ರೀಯ ಭಾವೈಕ್ಯತೆ, ಹುಲಿ ಸಂರಕ್ಷಣೆ, ಮಹಿಳಾ ಸಬಲೀಕರಣ, ವಿಷಯಾಧಾರಿತ ಕಾರ್ಯಕ್ರಮಕ್ಕೆ ಅಧ್ಯತೆ ನೀಡಲಾಗಿದೆ.

ಪ್ರತಿ ತಂಡಗಳಿಗೂ ಕನಿಷ್ಟ 25 ರಿಂದ 50 ವಿಧ್ಯಾರ್ಥಿಗಳಿಗೆ ಕಾರ್ಯಕ್ರಮ ನೀಡಲು ಅವಕಾಶ ನೀಡಲಾಗಿದ್ದು ಅತ್ಯುತ್ತಮ ಪ್ರದರ್ಶನ ನೀಡುವ ತಂಡಗಳಿಗೆ ಯುವದಸರಾದಲ್ಲಿ ಭಾಗವಹಿಸಲು ಅವಕಾಶ ಸಿಗಲಿದೆ. ದೂರದ ಊರುಗಳಿಂದ ಬರುವ ಕಾಲೇಜು ತಂಡಗಳಿಗೆ ಬಸ್, ವಾಸ್ಥವ್ಯ ವ್ಯವಸ್ಥೆ ಮಾಡಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಸೋಮಣ್ಣ ಮಾಹಿತಿ ನೀಡಿದರು.

ಸಭೆಯಲ್ಲಿ ಸಂಸದ ಪ್ರತಾಪ್ ಸಿಂಹ,ಶಾಸಕ ಎಸ್.ಎ.ರಾಮದಾಸ್,ಶಾಸಕ ಎಲ್.ನಾಗೇಂದ್ರ, ಎಡಿಸಿ ಪೂರ್ಣಿಮ,ಕಮಿಷನರ್ ಕೆ.ಟಿ.ಬಾಲಕೃಷ್ಣ,ಎಸ್ಪಿ ರಿಷ್ಯಂತ್ ಸೇರಿದಂತೆ ಅಧಿಕಾರಿಗಳು ಭಾಗಿಯಾಗಿದ್ದರು.

Key words: Mysore-Dasara –yuva sambrama- Date- fix