ಮೈಸೂರು,ಜೂ,9,2020(www.justkannada.in): ಆಷಾಢ ಮಾಸ ಸಮೀಪಿಸುತ್ತಿರುವ ಹಿನ್ನೆಲೆ. ಆಷಾಢ ಮಾಸದಲ್ಲಿ ಚಾಮುಂಡಿಬೆಟ್ಟದಲ್ಲಿ ಯಾವ ರೀತಿ ಕ್ರಮ ಕೈಗೊಳ್ಳಬೇಕೆಂದು ಮುಂದಿನ ವಾರ ನಿರ್ಧರಿಸಲಾಗುತ್ತದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ತಿಳಿಸಿದರು.
ಮೈಸೂರಿನಲ್ಲಿ ಇಂದು ಮಾತನಾಡಿದ ಡಿಸಿ ಅಭಿರಾಂ ಜೀ ಶಂಕರ್, ನಿನ್ನೆಯಿಂದ ದೇವರ ದರ್ಶನ ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ವಾರ ಪೂರ್ತಿ ಜನರು ದೇಗುಲಕ್ಕೆ ಬಂದಾಗ ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ಗಮನಿಸಲಾಗುವುದು. ಎಲ್ಲಕ್ಕಿಂತ ಪ್ರಮುಖವಾಗಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವ ವಿಚಾರದಲ್ಲಿ ಜನರು ಯಾವ ರೀತಿ ನಡೆದುಕೊಳ್ಳುತ್ತಾರೆ ಎಂಬುದನ್ನು ಗಮನಿಸುತ್ತೇವೆ. ಇದರ ಆಧಾರದ ಮೇಲೆ ಆಷಾಢ ಶುಕ್ರವಾರದಲ್ಲಿ ಏನು ಮಾಡಬೇಕೆಂದು ನಿರ್ಧರಿಸುತ್ತೇವೆ ಎಂದು ಮಾಹಿತಿ ನೀಡಿದರು.
ಇನ್ನು ಈ ಸಂಬಂಧ ಧಾರ್ಮಿಕ ದತ್ತಿ ಇಲಾಖೆಯ ಅಧಿಕಾರಿಗಳ ಜೊತೆಯೂ ಚರ್ಚಿಸಿ ಸೂಕ್ತ ತೀರ್ಮಾನ ಕೈಗೊಳ್ಳುತ್ತೇವೆ. ಈಗಾಗಲೇ ಒಂದು ಹಂತದ ಚರ್ಚೆ ಮಾಡಲಾಗಿದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಮ್ ಜಿ ಶಂಕರ್ ಹೇಳಿದರು.
Key words: mysore- DC-Abhiram jee Shankar-ashada- chamundi hills






