ಜಿಲ್ಲಾಧಿಕಾರಿ ನಿವಾಸಲ್ಲಿ ಈಜುಕೊಳ : ಪ್ರಾದೇಶಿಕ ಆಯುಕ್ತರಿಂದ ಸರಕಾರಕ್ಕೆ 6 ಅಂಶಗಳ ನ್ಯೂನತೆ ವರದಿ..!

ಮೈಸೂರು, ಜೂ.22, 2021 : ( www.justkannada.in news ) ಜಿಲ್ಲಾಧಿಕಾರಿ ಅಧಿಕೃತ ಸರಕಾರಿ ನಿವಾಸದಲ್ಲಿ ಈಜುಕೊಳ ನಿರ್ಮಾಣ ಬಗ್ಗೆ ಮೈಸೂರು ಪ್ರಾದೇಶಿಕ ಆಯುಕ್ತರಿಂದ ಸರಕಾರಕ್ಕೆ ತನಿಖಾ ವರದಿ ಸಲ್ಲಿಕೆ.jk
ಪ್ರಾದೇಶಿಕ ಆಯುಕ್ತರ ತನಿಖಾ ವರದಿ ಪ್ರಕಾರ ಜಿಲ್ಲಾಧಿಕಾರಿ ಸರಕಾರಿ ನಿವಾಸಲ್ಲಿ ಈಜುಕೊಳ ನಿರ್ಮಾಣದಲ್ಲಿ ಆಗಿರುವ ಪ್ರಮುಖ ನ್ಯೂನತೆಗಳು ಹೀಗಿವೆ…
1. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣಕ್ಕೆ ಸಂಬಂಧಪಟ್ಟಂತೆ 32 ಲಕ್ಷ ರೂ ಗಳಿಗೆ ಅಂದಾಜುಪಟ್ಟಿಯನ್ನು ತಯಾರಿಸಿದ್ದು, ಅಂದಾಜುಪಟ್ಟಿ ಗೆ ತಾಂತ್ರಿಕ ವರ್ಗದವರಿಂದ ಅಥವಾ ಲೋಕೋಪಯೋಗಿ ಇಲಾಖೆಯಿಂದ ಅನುಮೋದನೆ ಪಡೆದಿಲ್ಲ.
2. ಈಜುಕೊಳದ ನಿರ್ಮಾಣದ ಬಗ್ಗೆ ಯಾವುದೇ ಪೂರ್ವಭಾವಿ ಆಡಳಿತಾತ್ಮಕ ಮಂಜೂರಾತಿ ಪಡೆದಿಲ್ಲ
3. ಈಜುಕೊಳದ ನಿರ್ಮಾಣಕ್ಕೆ ಸಂಬಂಧಪಟ್ಟಂತೆ ಯಾವುದೇ ಕಾರ್ಯಾದೇಶ ಇಲ್ಲ.
4. ಕಾಮಗಾರಿ ನಿರ್ವಹಿಸಿದವರ ಒಪ್ಪಂದ ಪತ್ರಗಳು ಇಲ್ಲ.
5. ಪಾರಂಪರಿಕ ಸಂರಕ್ಷಣಾ ಸಮಿತಿಯ ಅನುಮೋದನೆ ಪಡೆದಿಲ್ಲ.
6. ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣ ಮಾಡಿರುವುದು ಯಾವುದೇ ಸಾರ್ವಜನಿಕರಿಗೆ ಉಪಯೋಗಿಸಲು ಸಾಧ್ಯವಿರುವುದಿಲ್ಲ.
ಜಿಲ್ಲಾಧಿಕಾರಿಗಳ ಅಧಿಕೃತ ನಿವಾಸದ ಆವರಣದಲ್ಲಿ ಈಜುಕೊಳ ನಿರ್ಮಾಣವು ಯಾವುದೇ ಸಾರ್ವಜನಿಕ ಹಿತಾಸಕ್ತಿ ಹೊಂದಿರುವುದಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ ಎಂದು ತಿಳಿದು ಬಂದಿದೆ.

ಕೃಪೆ-internet

key words : mysore-DC-office-swiming-pool-RC-report-karnataka