ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯ ವಿರುದ್ಧ ತನಿಖೆಗೆ  ಜಿಲ್ಲಾಧಿಕಾರಿ ಆದೇಶ….

ಮೈಸೂರು,ಅಕ್ಟೋಬರ್,28,2020(www.justkannada.in): ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮೈಸೂರು ಜಿಲ್ಲಾಡಳಿತ  ಮಣಿದಿದೆ.Mysore DC-ordered – inquiry- against -Mysore Palace Board -Deputy Director -TS Subramanya.

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ವಿರುದ್ಧ ತನಿಖೆ ನಡೆಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯ ಅವರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ  ಕಳೆದ 9 ದಿನಗಳಿಂದ ದಲಿತ ಸಂಘರ್ಷ ಸಮಿತಿ ಮುಖಂಡ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು.

ಕಳೆದ 9 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು  ತಮ್ಮ ಮನವಿಗೆ ಸ್ಪಂದಿಸದಿದ್ದರೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದರು.Mysore DC-ordered – inquiry- against -Mysore Palace Board -Deputy Director -TS Subramanya.

ಇದೀಗ ಪ್ರತಿಭಟನಾಕಾರರ ಹೋರಾಟಕ್ಕೆ ಮಣಿದಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, 9 ದಿನಗಳ ಪ್ರತಿಭಟನೆಯ ಬಳಿಕ ಟಿ.ಎಸ್ ಸುಬ್ರಹ್ಮಣ್ಯ ವಿರುದ್ದ ತನಿಖೆಗೆ ಆದೇಶಿಸಿದ್ದಾರೆ. ತನಿಖಾ ಆದೇಶ ಪ್ರತಿ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದಿದ್ದಾರೆ. ತಮ್ಮ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದ ಹಿನ್ನೆಲೆಯಲ್ಲಿ ಚೋರನಹಳ್ಳಿ ಶಿವಣ್ಣ ಪ್ರತಿಭಟನಾ ಸ್ಥಳ ತೆರವು ಮಾಡಿದರು.

Key words: Mysore DC-ordered – inquiry- against -Mysore Palace Board -Deputy Director -TS Subramanya.