‘ ನಿನಗೆ ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು’ – ಸಂಸದಗೆ ಸವಾಲು ಹಾಕಿದ ಶಾಸಕ..!

ಮೈಸೂರು, ಮೇ 28, 2021: (www.justkannada.in news ) ನಿನಗೆ ತಾಕತ್ತಿದ್ದರೆ ಜಿಲ್ಲಾಧಿಕಾರಿಯನ್ನು ವರ್ಗಾವಣೆ ಮಾಡಿಸು. ಸುಖಾ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ. ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿದರೆ ಹುಲಿ ಆಗಲ್ಲ ಎಂದು ಸಂಸದ ಪ್ರತಾಪ್ ವಿರುದ್ಧ ಶಾಸಕ ಟಿ.ಡಿ.ದೇವೇಗೌಡ ಹರಿಹಾಯ್ದರು.jk
ನಗರದ ದಟ್ಟಗಳ್ಳಿಯಲ್ಲಿ ನೂತನವಾಗಿ ಕಾರ್ಯರಂಭ ಮಾಡಿರುವ ‘ಕೋವಿಡ್ ಮಿತ್ರ’ ಕೇಂದ್ರಕ್ಕೆ ಶಾಸಕ ಜಿ.ಟಿ.ದೇವೇಗೌಡ ಅವರು ಇಂದು ಆಂಬ್ಯುಲೆನ್ಸ್ ಕೊಡುಗೆ ನೀಡಿದರು. ಇದರ ಅಂಗವಾಗಿ ಪಾಲಿಕೆ ಆರೋಗ್ಯಾಧಿಕಾರಿ ಡಾ ನಾಗರಾಜ್ ರವರಿಗೆ ಆಂಬ್ಯುಲೆನ್ಸ್ ವಾಹನದ ಕೀ ಹಸ್ತಾಂತರ ಮಾಡಿದರು. ಬಳಿಕ ಮಾಧ್ಯಮಗಳ ಜತೆ ಮಾತನಾಡಿದರು. ಈ ವೇಳೆ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಅವರ ವಿರುದ್ಧ ಸಂಸದ ಪ್ರತಾಪ್ ಸಿಂಹ, ಕಳೆದ ಕೆಲ ದಿನಗಳಿಂದ ನಿರಂತರ ಆರೋಪ ಮಾಡುತ್ತಿರುವ ಬಗ್ಗೆ ಶಾಸಕ ಜಿ.ಟಿ.ದೇವೇಗೌಡರ ಗಮನ ಸೆಳೆಯಲಾಯಿತು. ಆಗ ಜಿಟಿಡಿ ಹೇಳಿದಿಷ್ಟು….

ನಿನಗೆ ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿಸು. ಸುಖಾ ಸುಮ್ಮನೆ ಹಾದಿ ಬೀದಿಲಿ ನಿಂತು ಮಾತನಾಡಬೇಡಿ. ಮಾಧ್ಯಮಗಳ ಮುಂದೆ ಹೇಳಿಕೆ‌ ನೀಡಿದರೆ ಹುಲಿ ಆಗಲ್ಲ. ಅಧಿಕಾರಿಗಳ ನಡುವೆ ಒಡಕು ಮೂಡಿಸುವ ಕೆಲಸ ಮಾಡಬೇಡಿ. ಜಿಲ್ಲೆಯ ಶಾಸಕರು ನಿಮಗಿಂತ ಹೆಚ್ಚು ಕೆಲಸ‌ ಮಾಡ್ತಿದ್ದಾರೆ. ಸ್ವಂತ ಹಣದಲ್ಲಿ ಕೋವಿಡ್ ನಿಯಂತ್ರಣಕ್ಕೆ ಮುಂದಾಗಿದ್ದಾರೆ. ಸಂಸದರಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ಯ ಹೇಳು. ವೈಫಲ್ಯತೆ ಬಗ್ಗೆ ವಿರೋಧ ಪಕ್ಷದವರು ಮಾತನಾಡಬೇಕು ಆಡಳಿತ ಪಕ್ಷದವರಲ್ಲ. ನೀನು ಪವರ್‌ಫುಲ್ ಎಂಪಿ. ಪಿಎಂ, ಸಿಎಂ ನೀನು ಹೇಳಿದಂತೆ ಕೇಳ್ತಾರೆ. ತಾಕತ್ತಿದ್ದರೆ ಡಿಸಿಯನ್ನ ವರ್ಗಾವಣೆ ಮಾಡಿ ತೋರಿಸು. ಅದನ್ನ ಬಿಟ್ಟು ಪೇಪರ್‌ ಸ್ಟೇಟ್‌ಮೆಂಟ್ ಕೊಟ್ಟು ಗೊಂದಲ ಯಾಕೆ ಮೂಡುಸ್ತೀರಾ? ಜನ ಮೈಸೂರಿನ ಬಗ್ಗೆ ಆಡಿಕೊಂಡು ನಗುತ್ತಿದ್ದಾರೆ.
ನಿಮ್ಮ ಹೇಳಿಕೆ, ಆರೋಪಗಳ ಹಿಂದೆ ವೈಯುಕ್ತಿಕ ಸಮಸ್ಯೆ ಇದೆ. ನಿಮ್ಮ ಹೇಳಿಕೆಗಳು ಜನರಲ್ಲಿ ಅನುಮಾನ ಸೃಷ್ಟಿಸಿವೆ ಮೈಸೂರಿನಲ್ಲಿ ಶಾಸಕ ಜಿ.ಟಿ.ದೇವೆಗೌಡ ಹೇಳಿಕೆ.

ಒಬ್ಬ ಮಾತ್ರ ಹೀರೋ, ನಾವೆಲ್ಲಾ ಝೀರೋನಾ ?

ಪ್ರತಾಪ್‌ ಸಿಂಹಗೆ ಶಾಸಕ ಜಿ.ಟಿ.ದೇವೆಗೌಡ ತರಾಟೆ. ಸಾ.ರಾ.ಮಹೇಶ್‌ ಮಾತ್ರ ಮೈಸೂರು ಜಿಲ್ಲೆಯಲ್ಲಿ ಕೆಲಸ ಮಾಡ್ತಿದ್ದಾರೆ ಎಂದಿದ್ದ ಪ್ರತಾಪ್‌ ಸಿಂಹ. ಪ್ರತಾಪ್‌ ಸಿಂಹ ಹೇಳಿಕೆಗೆ ಕೆಂಡಾಮಂಡಲರಾದ ಜಿಟಿಡಿ. ನಾವೆಲ್ಲ ನಮ್ಮ ಸ್ವಂತ ಹಣ ಖರ್ಚು ಮಾಡ್ತಿದ್ದೀವಿ. ಸಂಸದನಾಗಿ ನೀನೆಷ್ಟು ಸ್ವಂತ ಹಣ ಖರ್ಚು ಮಾಡಿದ್ದೀಯ ಹೇಳು. ಮೈಸೂರಿನಲ್ಲಿ ಶಾಸಕ ಜಿ.ಟಿ.ದೇವೆಗೌಡ ಹೇಳಿಕೆ‌.

ಜನ ಸಾಯ್ತಿದ್ದಾರೆ. ಈಗ ಸರ್ಕಾರ ತೆಗೆಯಲು ಹೋಗಬೇಕಿತ್ತ ?

ಚಾಮುಂಡೇಶ್ವರಿ ಕ್ಷೇತ್ರದ ಶಾಸಕ ಜಿ‌.ಟಿ.ದೇವೇಗೌಡ ಹೇಳಿಕೆ‌. ಕರೊನಾ ಬಂದು ರಾಜ್ಯದ ತುಂಬಾ ಜನ ಸಾಯ್ತಾ ಇದ್ದಾರೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಬದಲಾವಣೆ ಮಾಡಲು ಹೊರಟಿರುವುದು ಸರಿಯಲ್ಲ. ಜನರ ಕಷ್ಟ ನೋಡುವ ಬದಲು ದೆಹಲಿಗೆ ಹೋಗುವ ಅಗತ್ಯ ಇತ್ತ ? ಯಡಿಯೂರಪ್ಪ ಚನ್ನಾಗಿ ಕೆಲಸ ಮಾಡುತ್ತಿದ್ದಾರೆ. ಅವರನ್ನು ಕೆಲಸ ಮಾಡಲು ಬಿಡಿ. ಸರ್ಕಾರ ಬೀಳಸಲು ಪ್ರಯತ್ನ ಮಾಡಿರೋದು ಸರಿಯಲ್ಲ. ಮೈಸೂರಿನಲ್ಲಿ ಶಾಸಕ ಜಿ.ಟಿ.ದೇವೇಗೌಡ ಹೇಳಿಕೆ.

key words : mysore-DC-Rohini.sindhoori-mal-GTD-MP-prathap.simha-cold.war-covid