ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ದು ಮಾಡಿ ಮೈಸೂರು ಡಿಸಿ ರೋಹಿಣಿ ಸಿಂಧೂರಿ ಆದೇಶ…

ಮೈಸೂರು,ಏಪ್ರಿಲ್,21,2021(www.justkannada.in):  ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೆಚ್ಚುತ್ತಿರುವ ಕೊರೋನಾ ತಡೆಗಟ್ಟಲು ಜಿಲ್ಲಾಡಳಿತ ಸಿದ್ಧತೆ ನಡೆಸಿದ್ದು  ಕೋವಿಡ್ ಕೆಲಸಕ್ಕೆ ನಿಯೋಜನೆಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

jk

ಈ ಕುರಿತು ಆದೇಶ ಹೊರಡಿಸಿರುವ ಮೈಸೂರು ಡಿಸಿ ರೋಹಿಣಿ ಸಿಂಧೂರಿ, ಕೋವಿಡ್ ಕೆಲಸಕ್ಕೆ ನಿಯೋಜನೆ ಯಾಗಿರುವವರಿಗೆ ಒಂದು ತಿಂಗಳ ಕಾಲ ರಜೆ ರದ್ಧು ಮಾಡಲಾಗಿದ್ದು  ರಜೆ ಬೇಕಾದರೇ ಕಾರಣ ನೀಡಿ ಅನುಮತಿ ಪಡೆಯಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.Mysore -DC -Rohini Sindhuri- orders -cancellation -leave -one month-covid- Warriors

ರಾಜ್ಯದಲ್ಲಿ ಕೊರೋನಾ ಹೆಚ್ಚುತ್ತಿದ್ದು ಈ ಹಿನ್ನೆಲೆಯಲ್ಲಿ ಕೋವಿಡ್ ತಡೆಗಾಗಿ ರಾಜ್ಯ ಸರ್ಕಾರ ನೈಟ್ ಕರ್ಫ್ಯೂ ವೀಕೆಂಡ್ ಕರ್ಫ್ಯೂ ಜಾರಿಗೊಳಿಸಿದೆ.

Key words: Mysore -DC -Rohini Sindhuri- orders -cancellation -leave -one month-covid- Warriors