ಮೈಸೂರು:ನಾಯಿಗಳ ದಾಳಿಗೆ ಜಿಂಕೆ ಬಲಿ…

ಮೈಸೂರು,ಮೇ,16,2019(www.justkannada.in) ಆಹಾರ ಆರಿಸಿ ಕಾಡಿನಿಂದ ನಾಡಿಗೆ ಬಂದಿದ್ದ ಜಿಂಕೆ ಮೇಲೆ ನಾಯಿಗಳು ದಾಳಿ ನಡೆಸಿದ ಪರಿಣಾಮ ಜಿಂಕೆ ಸಾವನ್ನಪ್ಪಿರುವ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲ್ಲೂಕಿನಲ್ಲಿ ನಡೆದಿದೆ.

ನಂಜನಗೂಡು ತಾಲ್ಲೂಕಿನ ಚಿನ್ನಂಬಳ್ಳಿ ಗ್ರಾಮದಲ್ಲಿ  ಈ ಘಟನೆ ನಡೆದಿದೆ.  ನಂಜನಗೂಡಿನ ಚಿನ್ನಂಬಳ್ಳಿ ಗ್ರಾಮದ ಬಳಿ ಆಹಾರ ಅರಸಿ ನಾಡಿಗೆ ಬಂದಿದ್ದ ಜಿಂಕೆ ಮೇಲೆ ನಾಯಿಗಳು ದಾಳಿ ನಡೆಸಿವೆ. ಈ ವೇಳೆ ಜಿಂಕೆ ರಕ್ಷಣೆಗೆ ಗ್ರಾಮಸ್ಥರು ಮುಂದಾಗಿದ್ದು  ನಾಯಿಗಳನ್ನ ಓಡಿಸುವಷ್ಟರಲ್ಲಿ ಜಿಂಕೆಯ ಕುತ್ತಿಗೆ ಭಾಗಕ್ಕೆ‌ಗಾಯವಾಗಿತ್ತು.

ದಾಳಿಯಿಂದ ತೀವ್ರವಾಗಿ ಗಾಯಗೊಂಡಿದ್ದ  ಜಿಂಕೆ ತೀವ್ರ ರಕ್ತಸ್ರಾವದಿಂದ ಸ್ಥಳದಲ್ಲೆ ‌ಮೃತಪಟ್ಟಿದೆ. ಗ್ರಾಮಸ್ಥರು  ಘಟನೆಯ ಬಗ್ಗೆ ಮಾಹಿತಿಯನ್ನ ಅರಣ್ಯಾಧಿಕಾರಿಗಳಿಗೆ ತಿಳಿಸಿದ್ದಾರೆ.

Key words: Mysore: Deer-dogs –attack