ಮೈಸೂರು,ನವೆಂಬರ್,1,2025 (www.justkannada.in): ಮೈಸೂರು ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಮಾಜಿ ಸಿಎಂ ಹಿಂದುವಳಿದ ವರ್ಗಗಳ ಹರಿಕಾರ ಡಿ.ದೇವರಾಜು ಅರಸು ಅವರ ಪ್ರತಿಮೆ ಲೋಕಾರ್ಪಣೆ ಮಾಡದ ಹಿನ್ನೆಲೆಯಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಯಿತು.
ಬಿಜೆಪಿ ವಿಧಾನಪರಿಷತ್ ಸದಸ್ಯ ಹೆಚ್.ವಿಶ್ವನಾಥ್ ನೇತೃತ್ವದಲ್ಲಿ ಮೈಸೂರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕುವ ಮೂಲಕ ಪ್ರತಿಭಟನೆ ನಡೆಸಲಾಯಿತು. ತಿಂಗಳುಗಳು ಕಳೆದರೂ ದೇವರಾಜ ಅರಸು ಅವರ ಪ್ರತಿಮೆ ಲೋಕಾರ್ಪಣೆ ಮಾಡದ ಸರ್ಕಾರದ ವಿರುದ್ದ ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದರು.
ಅಲ್ಲದೆ ಇಂದೇ ಪ್ರತಿಮೆಯನ್ನ ಅನಾವರಣ ಮಾಡಬೇಕೆಂದು ಆಗ್ರಹಿಸಿ ಪ್ರತಿಭಟನಾಕಾರರು ಡಿಸಿ ಕಚೇರಿಗೆ ಮುತ್ತಿಗೆಗೆ ಯತ್ನಿಸಿದರು. ಈ ವೇಳೆ ಪ್ರತಿಭಟನಾಕಾರರನ್ನ ಪೊಲೀಸರು ತಡೆದಿದ್ದು ಮಾತಿನ ಚಕಮಕಿ ನಡೆಯಿತು.
Key words: Mysore, unveiling, Devaraja Urs, statue, protest







