Saturday, September 12, 2026

BDA Apartments

Home Front Page  ಪವರ್ ಟಿವಿ ಸುದ್ಧಿವಾಹಿನಿ ಪ್ರಸಾರಕ್ಕೆ ತಡೆ ಒಡ್ಡಿದ ಸರ್ಕಾರದ ಕ್ರಮಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ...

 ಪವರ್ ಟಿವಿ ಸುದ್ಧಿವಾಹಿನಿ ಪ್ರಸಾರಕ್ಕೆ ತಡೆ ಒಡ್ಡಿದ ಸರ್ಕಾರದ ಕ್ರಮಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡನೆ….

ಮೈಸೂರು,ಸೆಪ್ಟಂಬರ್,29,2020(www.justkannada.in): ಸಕಾರಣವಿಲ್ಲದೇ ಪವರ್ ಟಿವಿ ಸುದ್ಧಿವಾಹಿನಿ ಪ್ರಸಾರಕ್ಕೆ ತಡೆ ಒಡ್ಡಿದ ಸರ್ಕಾರದ ಕ್ರಮಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡನೆ ವ್ಯಕ್ತಪಡಿಸಿದೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ಕ್ಷೇತ್ರದ ಮೇಲೆ ಪದೇ ಪದೇ ಈ ರೀತಿಯ ತೊಂದರೆಗಳು ಒಂದಿಲ್ಲೊಂದು ಕಾರಣಕ್ಕೆ ಎದುರಾಗುತ್ತಿರುವುದು ವಿಷಾದನೀಯ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಬೇಸರ ವ್ಯಕ್ತಪಡಿಸಿದೆ.mysore-district-journalists-association-condemns-government-action-blocking-broadcast-power-tv

ಒಂದು ವಾಹಿನಿಯನ್ನು ಸ್ಥಗಿತಗೊಳಿಸುವುದರಿಂದ ನೂರಾರು ಕುಟುಂಬಗಳು ಬೀದಿಪಾಲಾಗಲಿವೆ ಎಂಬ ಕನಿಷ್ಟ ಪ್ರಜ್ಞೆ ಪೊಲೀಸರಿಗೆ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ. ಹಾಗೆಯೇ ಆಗಿರುವ ಅನಾಹುತವನ್ನು ಸರಿಪಡಿಸುವ ಮೂಲಕ ಅಲ್ಲಿನ ನೌಕರರಿಗೆ ನೈತಿಕ ಬೆಂಬಲ ಸೂಚಿಸಬೇಕಾದ ಹೊಣೆ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಗ್ರಹಿಸಿದೆ.

Key words: Mysore District Journalists Association -condemns –government- action -blocking -broadcast -Power TV