Saturday, August 22, 2026

BDA Apartments

Home Front Page ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮೈಸೂರು ಜಿಲ್ಲಾ...

ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ.

ಮೈಸೂರು,ಜು, 16,2019(www.justkannada.in): ಎಸ್ ಎಸ್ ಎಲ್ ಸು ಹಾಗೂ ಪಿಯುಸಿಯಲ್ಲಿ ಅತಿ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ವಿದ್ಯಾರ್ಥಿಗಳಿಗೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದಿಂದ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ನಡೆಯಿತು.

ಜಿಲ್ಲಾ ಪತ್ರಕರ್ತರ ಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ  ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಅತಿ  ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪುರಸ್ಕಾರ ನೀಡಿ ಗೌರವಿಸಲಾಯಿತು.  10 ಮಂದಿ ಪತ್ರಕರ್ತ ಮಕ್ಕಳಿಗೆ ಗಣ್ಯರು ಪುರಸ್ಕಾರ ನೀಡಿ ಗೌರವಿಸಿದರು.

ಪತ್ರಕರ್ತರ ಮಕ್ಕಳನ್ನು ಉತ್ತೇಜಿಸುವ ನಿಟ್ಟಿನಲ್ಲಿ ಈ ಕಾರ್ಯಕ್ರಮ ನಡೆದುಕೊಂಡು ಬಂದಿದೆ. ಕಾರ್ಯಕ್ರಮದಲ್ಲಿ ಪ್ರಮತಿ ಅಕಾಡೆಮಿ ರಾಜೀವ್ ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಸಿ.ಕೆ ಮಹೇಂದ್ರ , ಮೈಸೂರು ಮೆಡಿಕಲ್ ಕಾಲೇಜಿನ ಮುಖ್ಯ ಆಡಳಿತಾಧಿಕಾರಿ ಗಾಯತ್ರಿ. ಭಾಗಿಯಾಗಿದ್ದರು.

Key words: Mysore –District- Journalists- Association –honors- students