ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಮೈಸೂರು ಜಿಲ್ಲಾ ಕೆಡಿಪಿ ಸಭೆ: ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳು ಭಾಗಿ…

ಮೈಸೂರು, ನವೆಂಬರ್,24,2020(www.justkannada.in): ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ನೇತೃತ್ವದಲ್ಲಿ ಕೆಡಿಪಿ ಸಭೆ ಆರಂಭವಾಗಿದ್ದು ಜಿಲ್ಲೆಯ ಸಮಗ್ರ ಅಭಿವೃದ್ಧಿ ಬಗ್ಗೆ ಚರ್ಚೆ ನಡೆಸಲಾಗುತ್ತಿದೆ.

ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ನೇತೃತ್ವದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಯುತ್ತಿದ್ದು, ಸಭೆಯಲ್ಲಿ ಜಿ.ಪಂ ಅಧ್ಯಕ್ಷೆ ಪರಿಮಳಾ ಶ್ಯಾಮ್, ಶಾಸಕರಾದ ಹರ್ಷವರ್ಧನ್, ಜಿಟಿ ದೇವೇಗೌಡ, ಕೆ ಮಹದೇವ್, ಅನಿಲ್ ಚಿಕ್ಕಮಾದು, ಎಲ್ ನಾಗೇಂದ್ರ, ಆರ್ ಅಶ್ವಿನ್ ಕುಮಾರ್ ಸೇರಿದಂತೆ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ.Mysore District- KDP -meeting – Minister- ST Somashekhar-Officers -representatives

ಹಾಗೆಯೇ ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, ಪಾಲಿಕೆ ಆಯುಕ್ತ ಗುರುದತ್ ಹೆಗಡೆ ಸೇರಿದಂತೆ ಜಿಲ್ಲಾ ಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದು ಜಿಲ್ಲೆಯ ಅಭಿವೃದ್ಧಿ ವಿಚಾರ ಕುರಿತು ಚರ್ಚೆ ನಡೆಸಲಾಗುತ್ತಿದೆ.

Key words: Mysore District- KDP -meeting – Minister- ST Somashekhar-Officers -representatives