ಮೈಸೂರು ಜಿಲ್ಲೆ: ಸಂಚಾರ ಆರಂಭಿಸಿದ್ದ ಬಸ್ ಮೇಲೆ ಕಲ್ಲು ತೂರಿದ ಕಿಡಿಗೇಡಿಗಳು…

ಮೈಸೂರು,ಡಿಸೆಂಬರ್,14,2020(www.justkannada.in):  ಸಾರಿಗೆ ನೌಕರರನ್ನ ಸರ್ಕಾರಿ ನೌಕರರನ್ನಾಗಿ ಮಾಡುವಂತೆ ಆಗ್ರಹಿಸಿ ಕಳೆದ ನಾಲ್ಕು ದಿನಗಳಿಂದ ಮುಷ್ಕರ ನಡೆಯುತ್ತಿದ್ದು, ಈ ಮಧ್ಯೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣದ ಸೀಗೂರು ಬಳಿ ಬಸ್ ಮೇಲೆ ಕಿಡಿಗೇಡಿಗಳು ಕಲ್ಲು ತೂರಾಟ ನಡೆಸಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.logo-justkannada-mysore

ಸಾರಿಗೆ ನೌಕರರ ಮುಷ್ಕರದಿಂದಾಗಿ ರಾಜ್ಯಾದ್ಯಂತ ಬಸ್ ಸಂಚಾರ ಬಂದ್ ಆಗಿದೆ. ಈ ಮಧ್ಯೆ ಬೆಂಗಳೂರು ಮತ್ತು ಮೈಸೂರು ಸೇರಿ ಹಲವು ಕಡೆಗಳಲ್ಲಿ ಪೊಲೀಸ್ ಭದ್ರತೆಯೊಂದಿಗೆ  ಬಸ್ ಸಂಚಾರ ಆರಂಭಿಸಲಾಗುತ್ತಿದೆ. ಈ ಹಿನ್ನೆಲೆ ಮೈಸೂರಿನ ಪಿರಿಯಾಪಟ್ಟಣದಿಂದ ಬೆಟ್ಟದಪುರಕ್ಕೆ  ಸಂಚಾರ ಆರಂಭಿಸಿದ್ದ ಬಸ್ ಮೇಲೆ ಸೀಗೂರು ಬಳಿ  ಕಿಡಿಗೇಡಿಗಳು ಕಲ್ಲು ತೂರಿದ್ದಾರೆ ಎನ್ನಲಾಗಿದೆ.Mysore District- thrown-stones - bus

ಬಸ್ ನಲ್ಲಿ 26 ಮಂದಿ ಪ್ರಯಾಣಿಕರು ಮತ್ತು 6 ಸಿಬ್ಬಂದಿಗಳು  ಇದ್ದರು. ಪೊಲೀಸ್ ಭದ್ರತೆಯಲ್ಲಿ ತೆರಳುತ್ತಿದ್ದ ಬಸ್ ಮೇಲೆ ಕಲ್ಲು ತೂರಾಟ ನಡೆಸಲಾಗಿದ್ದು ಬಸ್ ನ ಹಿಂಭಾಗದ ಗಾಜು ಪುಡಿಪುಡಿಯಾಗಿದೆ. ಈ ಸಂಬಂಧ ಬೆಟ್ಟದಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: Mysore District- thrown-stones – bus