ಕೊರೋನಾ ವಾರಿಯರ್ ‌ಗಳಾದ ಪತ್ರಕರ್ತರಿಗೆ ಲಸಿಕೆ ನೀಡಿದ ಮೈಸೂರು ಜಿಲ್ಲಾಡಳಿತ

ಮೈಸೂರು, ಏಪ್ರಿಲ್.06,2021(www.justkannada.in):  ಜಿಲ್ಲಾಡಳಿತ, ಮೈಸೂರು ಮಹಾನಗರ ಪಾಲಿಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ, ಮೈಸೂರಿನ ಆಸ್ಪತ್ರೆಗಳು ಹಾಗೂ ನರ್ಸಿಂಗ್ ಹೋಂಗಳ ಸಂಘ(ಮಹಾನ್)ದ ಸಹಯೋಗದಲ್ಲಿ ಮಂಗಳವಾರ ಶಾಂತವೇರಿ ಗೋಪಾಲಗೌಡ ಸ್ಮಾರಕ ಆಸ್ಪತ್ರೆಯಲ್ಲಿ 45ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಕೋವಿಡ್ ಲಸಿಕೆ ನೀಡಲಾಯಿತು.Illegally,Sand,carrying,Truck,Seized,arrest,driver

ಈ ವೇಳೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ. ರವಿಕುಮಾರ್ ಅವರು ಮಾತನಾಡಿ, ಕೊವಿಡ್ ವ್ಯಾಪಿಸುತ್ತಿದ್ದ ಕಾಲದಲ್ಲಿ, ಜಗತ್ತು ಸುರಕ್ಷಿತವಾಗಿ ಮನೆಯೊಳಗೆ ಇರುವ ಸಂದರ್ಭದಲ್ಲಿ ಪತ್ರಕರ್ತರು ಮಾತ್ರ ಜೀವದ ಹಂಗನ್ನು ತೊರೆದು ಕರ್ತವ್ಯದಲ್ಲಿ ನಿರತರಾಗಿದ್ದರು. ಅವರ ಆರೋಗ್ಯ ರಕ್ಷಣೆಗೆ ಲಸಿಕೆ ಅಗತ್ಯವಿದೆ. ಹೀಗಾಗಿ ಸರ್ಕಾರದ ಆದೇಶದಂತೆ 45 ವರ್ಷ ಮೇಲ್ಪಟ್ಟ ಪತ್ರಕರ್ತರು ಹಾಗೂ ಪತ್ರಕರ್ತರ ಕುಟುಂಬದ ಸದಸ್ಯರು ಉಚಿತವಾಗಿ ನೀಡುತ್ತಿರುವ ಲಸಿಕೆಯ ಸದುಪಯೋಗ ‌ಪಡಿಸಿಕೊಳ್ಳಬೇಕು ಎಂದರು.

ನಗರದಲ್ಲಿ ಕೋವಿಡ್-19ರ ಎರಡನೇ ಅಲೆ ಶುರುವಾಗಿರುವ ಹಿನ್ನೆಲೆಯಲ್ಲಿ ಕಳೆದ 3 ವಾರಗಳಿಂದ ಕೊರೊನ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿನಿತ್ಯ 150ಕ್ಕೂ ಹೆಚ್ಚಿನ ಪ್ರಕರಣಗಳು ಬೆಳಕಿಗೆ ಬರುತ್ತಿದೆ. ಇದಕ್ಕಾಗಿ ಜಿಲ್ಲಾಡಳಿತ ಪರಿಣಾಮಕಾರಿಯಾಗಿ ಆದೇಶ ಹೊರಡಿಸಿದ್ದು, ಕೇಂದ್ರ ಸರ್ಕಾರದ ಆದೇಶದಂತೆ ಉಚಿತವಾಗಿ ಸಾರ್ವಜನಿಕರಿಗೆ ಲಸಿಕೆ ನೀಡಲಾಗುತ್ತಿದೆ ಎಂದು ಮಹಾನಗರ ಪಾಲಿಕೆ ಆರೋಗ್ಯಾಧಿಕಾರಿ ಡಾ.ನಾಗರಾಜ್ ಹೇಳಿದರು.

ಲಸಿಕೆ ಪಡೆದರೆ ಆರೋಗ್ಯದ ಮೇಲೆ ಅಡ್ಡ ಪರಿಣಾಮಗಳು ಬೀರುತ್ತದೆ ಎಂಬ ಊಹಾಪೋಹಗಳು ಹರಡುತ್ತಿರುವ ಹಿನ್ನೆಲೆಯಲ್ಲಿ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಲಸಿಕೆಯನ್ನು ತೆಗೆದುಕೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಹೀಗಾಗಿ ಜನರಿಗೆ ಅರಿವು ಮೂಡಿಸಲು ಅನೇಕ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ ಎಂದರು.

ಶಾಂತವೇರಿ ಗೋಪಾಲಗೌಡ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕರಾದ ಡಾ.ಹೆಚ್.ವಿ.ಸಂತೃಪ್ತ್ ಅವರು ಮಾತನಾಡಿ, ಲಸಿಕೆಯು ಸಂಪೂರ್ಣವಾಗಿ ಸುರಕ್ಷಿತವಾಗಿದೆ‌. ಯಾವುದೇ ಅಡ್ಡ ಪರಿಣಾಮಗಳು ಇಲ್ಲ. 45 ವರ್ಷ ಮೇಲ್ಪಟ್ಟ ಎಲ್ಲರೂ ಲಸಿಕೆ ಪಡೆಯಬಹುದು ಎಂದು ಹೇಳಿದರು.

ವಾರ್ತ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಹಾಯಕ ನಿರ್ದೇಶಕ ರಾಜು ಆರ್ ಅವರು ಮಾತನಾಡಿ, ಜಿಲ್ಲಾಡಳಿತಕ್ಕೆ ಮನವಿಯನ್ನು ಸಲ್ಲಿಸಿದ ಜಿಲ್ಲಾ ಪತ್ರಕರ್ತರ ಸಂಘದ ಆಶಯದಂತೆ ಇಂದು 45 ವರ್ಷ ಮೇಲ್ಪಟ್ಟ ಪತ್ರಕರ್ತರಿಗೆ ಲಸಿಕೆಯನ್ನು ನೀಡಲಾಗುತ್ತಿದೆ. ಇದೊಂದು ಸುರಕ್ಷಿತವಾದ ಲಸಿಕೆಯಾಗಿದ್ದು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರೂ ಸಹ ಲಸಿಕೆಯನ್ನು ಪಡೆದಿದ್ದಾರೆ. ಈ ಹಿನ್ನೆಲೆಯಲ್ಲಿ 45 ವರ್ಷ ಮೇಲ್ಪಟ್ಟವರು ಲಸಿಕೆಯನ್ನು ಪಡೆದುಕೊಳ್ಳಬೇಕೆಂದು ತಿಳಿಸಿದರು.mysore-district-vaccinated-journalists-corona-warriors

ಈ ಸಂದರ್ಭದಲ್ಲಿ ಜಿಲ್ಲಾ ಕುಟುಂಬ ಕಲ್ಯಾಣಾಧಿಕಾರಿ ಡಾ.ಪಿ.ರವಿ, ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಎಂ.ಸುಬ್ರಹ್ಮಣ್ಯ,  ಉಪಾಧ್ಯಕ್ಷರಾದ ಅನುರಾಗ್ ಬಸವಣ್ಣ, ವಿಜಯ ಕರ್ನಾಟಕ ಮುಖ್ಯ ವರದಿಗಾರರಾದ ರಮೇಶ್ ಉತ್ತಪ್ಪ, ಹಿರಿಯ ಪತ್ರಕರ್ತ ಎಂ.ಟಿ.ಮಹದೇವ, ಹಿರಿಯ ಪತ್ರಿಕಾ ಛಾಯಾಗ್ರಾಹಕರಾದ ಪ್ರಗತಿ ಗೋಪಾಲಕೃಷ್ಣ, ಶ್ರೀರಾಮ್, ಲಕ್ಷ್ಮಿನಾರಾಯಣ ಯಾದವ್, ಹಂಪಾ ನಾಗರಾಜ್ ಸೇರಿದಂತೆ ಇತರರು ಹಾಜರಿದ್ದರು.

Key words:  Mysore District-vaccinated- journalists – Corona Warriors.