ಮೈಸೂರು,ಡಿಸೆಂಬರ್,16,2025 (www.justkannada.in): ಜಿಲ್ಲಾಡಳಿತದ ವತಿಯಿಂದ ವಿಶ್ವಮಾನವ ದಿನಾಚರಣೆಯನ್ನು ಡಿಸೆಂಬರ್ 29 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮoದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ ಶಿವರಾಜು ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ “ವಿಶ್ವ ಮಾನವ ” ದಿನಾಚರಣೆಯ ಸಂಬoಧ ಹಮ್ಮಿಕೊಂಡಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ನಾಡು ಕಂಡoತಹ ಮಹಾನ್ ವ್ಯಕ್ತಿಗಳಲ್ಲಿ ಕುವೆಂಪು ಅವರು ಒಬ್ಬರು. ಅಂತಹ ಕವಿ ಮಹಾಶಯರ ಜನ್ಮ ದಿನಾಚರಣೆಯನ್ನು ಆಚರಿಸುವುದು ನಮ್ಮೆಲ್ಲರಿಗೂ ಹೆಮ್ಮೆಯ ವಿಷಯವಾಗಿದ್ದು, ವಿಶ್ವಮಾನವ ಎಂದರೆ ಎಲ್ಲರನ್ನೂ ಒಳಗೊಂಡ, ಮನುಷ್ಯತ್ವದ ಭಾವನೆ. ಆದ್ದರಿಂದ ಸಮಾಜಕ್ಕೆ ನಾವೆಲ್ಲರೂ ಒಂದು ವಿಶ್ವಮಾನವರು ಎಂಬ ಉತ್ತಮ ಸಂದೇಶವನ್ನು ನೀಡಲು ಈ ಆಚರಣೆಯು ಮಾದರಿಯಾಗಲಿದೆ. ಆಗಾಗಿ ನಾವು ಯಾವಾಗಲು ವಿಶ್ವ ಮಾನವರಾಗಿ ಬದುಕಬೇಕು ಎಂಬ ನಿಟ್ಟಿನಲ್ಲಿ ವಿಶ್ವ ಮಾನವ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಜನವರಿ 01 ರಂದು ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ ದಿನಾಚರಣೆ
ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ” ದಿನಾಚರಣೆಯನ್ನು ಜನವರಿ 01 ರಂದು ಬೆಳಗ್ಗೆ 11 ಗಂಟೆಗೆ ಕರ್ನಾಟಕದ ಕಲಾಮಂದಿರದ ಆವರಣದಲ್ಲಿರುವ ಕಿರುರಂಗಮoದಿರದಲ್ಲಿ ಅರ್ಥಪೂರ್ಣವಾಗಿ ಆಚರಿಸಲಾಗುವುದು ಎಂದು ಅಪರ ಜಿಲ್ಲಾಧಿಕಾರಿ ಡಾ.ಪಿ ಶಿವರಾಜು ಅವರು ತಿಳಿಸಿದರು.
ಇಂದು ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ನಡೆದ “ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣಾ” ದಿನಾಚರಣೆಯ ಸಂಬoಧ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಅಮರ ಶಿಲ್ಪಿ ಜಕಣಾಚಾರಿ ಅವರು ಒಬ್ಬರು ಮಹಾನ್ ಶಿಲ್ಪಿ ಇಂದು ಅವರ ಶಿಲ್ಪಕಲೆಗಳು ಹಲವಾರು ಶಿಲ್ಪಿಗಳಿಗೆ ಸ್ಫೂರ್ತಿ ಆಗಿವೆ. ಅಂತಹವರ ಸಾಧನೆಗಳನ್ನು ಎಲ್ಲರಿಗೂ ತಿಳಿಸುವುದು ನಮ್ಮೆಲ್ಲರ ಕರ್ತವ್ಯವಾಗಿರುವುದರಿಂದ ವಿಶ್ವಕರ್ಮ ಅಮರ ಶಿಲ್ಪಿ ಜಕಣಾಚಾರಿ ಸಂಸ್ಮರಣೆಯಯ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದು ತಿಳಿಸಿದರು.
ಸಭೆಯಲ್ಲಿ ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಹಾಗೂ ಕರ್ನಾಟಕ ಕಾವಲು ಪಡೆಯ ಅಧ್ಯಕ್ಷರಾದ ಮೋಹನ್ ಕುಮಾರ್ ಗೌಡ, ಮೈಸೂರಿನ ಚಳುವಳಿದಾರರಾದ ಅರವಿಂದ್ ಶರ್ಮಾ, ಕರುನಾಡು ಸರ್ವೋದಯ ಸೇನೆಯ ಅಧ್ಯಕ್ಷರಾದ ರವಿಶಂಕರ್ ಅವರು ಸೇರಿದಂತೆ ಅಮರ ಶಿಲ್ಪಿ ಜಕಣಾಚಾರಿ ಸಮುದಾಯದ ಮುಖಂಡರುಗಳು ಉಪಸ್ಥಿತರಿದ್ದರು.
Key words: Celebrate, World Human Day , December 29th ,Dr. P. Shivaraju







