Friday, October 16, 2026

Dasara Wishes

Happy Dasara
Home Front Page ಮೈಸೂರಿನಲ್ಲಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು

ಮೈಸೂರಿನಲ್ಲಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು

ಮೈಸೂರು,ಜುಲೈ,14,2026 (www.justkannada.in): ನಗರದ ಪಾದಚಾರಿಗಳ ಸಂಚಾರಕ್ಕೆ ಅಡಚಣೆಯಾಗಿದ್ದ ಅತಿಕ್ರಮಣಗಳನ್ನು ತೆರವುಗೊಳಿಸುವ ನಿಟ್ಟಿನಲ್ಲಿ ಮೈಸೂರು ಮಹಾನಗರ ಪಾಲಿಕೆ ವಲಯ 6 ರವತಿಯಿಂದ ಇಂದು ವಿಶೇಷ ಕಾರ್ಯಾಚರಣೆ ನಡೆಸಲಾಯಿತು.

ಈ ಕಾರ್ಯಾಚರಣೆಗೆ ಪೂರ್ವಭಾವಿಯಾಗಿ ಜುಲೈ 14ರಂದು ಮೈಕ್ ಮೂಲಕ ವ್ಯಾಪಕ ಪ್ರಚಾರ ನಡೆಸಿ ಸಾರ್ವಜನಿಕರು ಹಾಗೂ ವ್ಯಾಪಾರಸ್ಥರಲ್ಲಿ ಅರಿವು ಮೂಡಿಸಲಾಗಿತ್ತು. ಪಾದಚಾರಿ ಮಾರ್ಗಗಳನ್ನು ಅತಿಕ್ರಮಿಸದಂತೆ ಹಾಗೂ ಸ್ವಯಂಪ್ರೇರಿತವಾಗಿ ತೆರವುಗೊಳಿಸಿಕೊಳ್ಳುವಂತೆ ಸೂಚನೆ ನೀಡಲಾಗಿತ್ತು.

ನಿಗದಿತ ಕಾರ್ಯಕ್ರಮದಂತೆ ಇಂದು ಮೈಸೂರು ಮಹಾನಗರ ಪಾಲಿಕೆಯ ವಲಯ-6 ವ್ಯಾಪ್ತಿಯ ಆಯುರ್ವೇದಿಕ್ ವೃತ್ತದಿಂದ ಸಬರ್ಬನ್ ಬಸ್ ನಿಲ್ದಾಣದವರೆಗೆ ಇರುವ ಇರ್ವಿನ್ ರಸ್ತೆಯ ಎರಡೂ ಬದಿಯ ಪಾದಚಾರಿ ಮಾರ್ಗಗಳಲ್ಲಿ ಅತಿಕ್ರಮಣ ತೆರವು ಕಾರ್ಯಾಚರಣೆ ಕೈಗೊಳ್ಳಲಾಯಿತು.ಮೈಸೂರಿನಲ್ಲಿ ಕಾರ್ಯಾಚರಣೆ: ಪಾದಚಾರಿ ಮಾರ್ಗ ಅತಿಕ್ರಮಣ ತೆರವು foot

ಪೊಲೀಸ್ ಇಲಾಖೆ ಹಾಗೂ ಮೈಸೂರು ಮಹಾನಗರ ಪಾಲಿಕೆ ಸಿಬ್ಬಂದಿಯ ಸಹಯೋಗದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಾದಚಾರಿ ಮಾರ್ಗಗಳ ಮೇಲೆ ನಿರ್ಮಿಸಲಾಗಿದ್ದ ತಾತ್ಕಾಲಿಕ ಶೆಡ್‌ ಗಳು, ವ್ಯಾಪಾರ ವಸ್ತುಗಳು ಸೇರಿದಂತೆ ವಿವಿಧ ಅತಿಕ್ರಮಣಗಳನ್ನು ತೆರವುಗೊಳಿಸಲಾಯಿತು.ಮೈಸೂರಿನಲ್ಲಿ ಕಾರ್ಯಾಚರಣೆ foot1

ನಗರದಲ್ಲಿ ಪಾದಚಾರಿಗಳಿಗೆ ಸುಗಮ ಹಾಗೂ ಸುರಕ್ಷಿತ ಸಂಚಾರ ವ್ಯವಸ್ಥೆ ಕಲ್ಪಿಸುವ ಉದ್ದೇಶದಿಂದ ಮುಂದಿನ ದಿನಗಳಲ್ಲಿಯೂ ಇಂತಹ ಕಾರ್ಯಾಚರಣೆಗಳು ಮುಂದುವರಿಯಲಿದೆ.ಪಾದಚಾರಿ ಮಾರ್ಗ ಅತಿಕ್ರಮಣ ತೆರವು jk02_new jk02 new

Key words: Mysore, encroachments, footpaths, Clearing, Operation