ಮೈಸೂರು: ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವು.

ಮೈಸೂರು,ಫೆಬ್ರವರಿ,24,2024(www.justkannada.in):  ಭೂಮಿ ಕಳೆದುಕೊಳ್ಳುವ ಭೀತಿಯಿಂದ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ರೈತ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಎಚ್ ಡಿ ಕೋಟೆ ತಾಲೂಕಿನ ಕಣಿಯನಹುಂಡಿ ಗ್ರಾಮದ ಗಿರಿಗೌಡ ಆತ್ಮಹತ್ಯೆಗೆ ಯತ್ನಿಸಿ ಮೃತಪಟ್ಟ ರೈತ. ಗಿರಿಗೌಡ ಅವರು ಒಂದೂವರೆ ಎಕರೆ ಜಮೀನು ಹೊಂದಿದ್ದು ಭೂಸ್ವಾಧೀನಕ್ಕೆ ಅರಣ್ಯ ಇಲಾಖೆ ನೋಟಿಸ್ ನೀಡಿರುವ ಹಿನ್ನೆಲೆಯಲ್ಲಿ ಭೂಮಿ ಕಳೆದುಕೊಳ್ಳುವ ಭೀತಿಯಲ್ಲಿ ಗಿರಿಗೌಡ ಆತ್ಮಹತ್ಯೆಗೆ ಯತ್ನಿಸಿದ್ದಾರೆ.

ತಕ್ಷಣ ಮೈಸೂರಿನ ಕೆ.ಆರ್ ಆಸ್ಪತ್ರೆಗೆ ಗಿರಿಗೌಡರನ್ನ ದಾಖಲಿಸಲಾಗಿದ್ದು, ಆದರೆ ಚಿಕಿತ್ಸೆ ಫಲಿಸದೆ ಕೆಆರ್ ಆಸ್ಪತ್ರೆಯಲ್ಲಿ ಗಿರಿಗೌಡ ಕೊನೆಯುಸಿರೆಳಿದಿದ್ದಾರೆ. ಈ ಕುರಿತು ಎಚ್ ಡಿ ಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Key words: Mysore- farmer – commit suicide – died.