Wednesday, September 16, 2026

BDA Apartments

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗ...
Home Crime ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

ಮೈಸೂರು: ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ: ಇಬ್ಬರು ಸಾವು, 7 ಮಂದಿ ಗಂಭೀರ

ಮೈಸೂರು,ಜೂನ್,15,2026 (www.justkannada.in):  ಬಾರ್ ಅಂಡ್ ರೆಸ್ಟೋರೆಂಟ್ ಹೋಟೆಲ್ ನಲ್ಲಿ ಶಾರ್ಟ್ ಸರ್ಕ್ಯೂಟ್  ನಿಂದ ಅಗ್ನಿ ಅವಘಡ ಸಂಭವಿಸಿ ಇಬ್ಬರು ಸಾವನ್ನಪ್ಪಿ 7 ಮಂದಿಗೆ ಗಂಭೀರ ಗಾಯಗಳಾಗಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ನಗರದ ದಟ್ಟಗಳ್ಳಿ ನೇತಾಜಿ ವೃತ್ತದ ಬಳಿ ಇರುವ ಫಾಕ್ಸ್ ಡೆನ್ ಲಿಕ್ಕರ್ ಗ್ಯಾರೇಜ್‌ ನಲ್ಲಿ ಈ ಘಟನೆ ನಡೆದಿದೆ. ಸಾಹಿಲ್ ಮತ್ತು ಪ್ರಕಾಶ್ ಮೃತಪಟ್ಟವರು ಎಂದು ಗುರುತಿಸಲಾಗಿದೆ. 7 ಜನರಿಗೆ ಗಂಭೀರ ಗಾಯಗಳಾಗಿದ್ದು ಚಿಕಿತ್ಸೆಗಾಗಿ ಸುಯೋಗ ಹಾಗೂ ಅಪೋಲೋ ಆಸ್ಪತ್ರೆಗೆ ಗಾಯಾಳುಗಳನ್ನು ದಾಖಲು ಮಾಡಲಾಗಿದೆ.ಮೈಸೂರು mysore fir

ಹೋಟೆಲ್ ನಲ್ಲಿ 25 ಕ್ಕೂ ಹೆಚ್ಚು ಜನರಿದ್ದರು ಎನ್ನಲಾಗಿದೆ. ಫೈರ್ ಇಂಜಿನ್ ತಂಡದಿಂದ 7 ಜನರ ರಕ್ಷಣೆ ಮಾಡಲಾಗಿದೆ.  ಅಗ್ನಿ ಅವಘಡದ ವೇಳೆ  ಕಟ್ಟಡದಲ್ಲಿ ದಟ್ಟ ಹೊಗೆ ಆವರಿಸಿದ್ದರಿಂದ ಆತಂಕಗೊಂಡ ಕೆಲವರು ಮೇಲಂತಸ್ತಿನಿಂದ ಜಿಗಿದು ಪಾರಾಗಲು ಯತ್ನಿಸಿದರು.ಬಾರ್ ಅಂಡ್ ರೆಸ್ಟೋರೆಂಟ್ ನಲ್ಲಿ ಅಗ್ನಿ ಅವಘಡ BDA JK_Adv BDA Adv

ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿಯನ್ನು ನಿಯಂತ್ರಣಕ್ಕೆ ತಂದಿದ್ದಾರೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.ಇಬ್ಬರು ಸಾವು jk02_new jk02 new

Key words: Mysore,  Fire, bar and restaurant, 2 dead, 7 seriously