Saturday, October 3, 2026

BDA Apartments

You should utilize any platform that you get to learn: Nagathihalli Chandrashekar BDA JK_Adv BDA Adv
Home Front Page ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ರಾಜಕಾರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ರಾಜಕಾರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ.

ಮೈಸೂರು,ಫೆಬ್ರವರಿ,10,2022(www.justkannada.in):  ಅಣ್ಣ ಚಾಮುಂಡೇಶ್ವರಿ ಕ್ಷೇತ್ರದ ಸಮಸ್ಯೆ ಬಗೆಹರಿಸಿ, ಮುಂದಿನ ಚುನಾವಣೆಗೆ ಚಾಮುಂಡೇಶ್ವರಿಗೆ ಯಾರು ಬರ್ತಾರೆ. ಹೀಗೆ  ಜೆಡಿಎಸ್ ಕಾರ್ಯಕರ್ತರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ನಾನೇ ಚಾಮುಂಡೇಶ್ವರಿ ಕ್ಷೇತ್ರಕ್ಕೆ ಬರುತ್ತೇನೆ ಎನ್ನುವ ಮೂಲಕ ಚಾಮುಂಡೇಶ್ವರಿ ಕ್ಷೇತ್ರದ ಚುನಾವಣಾ ರಾಜಕಾರಣಕ್ಕೆ ಹೊಸ ಟ್ವಿಸ್ಟ್ ಕೊಟ್ಟಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ, ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಅನಿತಾ ಕುಮಾರಸ್ವಾಮಿ ಸ್ಪರ್ಧೆ ಬೇಡ ಎಂದು ನಾನು, ಅವರು ಚರ್ಚೆ ಮಾಡಿದ್ದೇವೆ. ಕುಟುಂಬ ರಾಜಕಾರಣದ ಹೆಸರಿನಲ್ಲಿ ನಮ್ಮ ಮೇಲೆ ಅಪಪ್ರಚಾರ ನಡೆಯುತ್ತಿದೆ. ಈ ಅಪಪ್ರಚಾರದಿಂದ ದೂರವಾಗಲು ಇಂತಹ ಚರ್ಚೆಯನ್ನ ನಾನು ಅನಿತಾ ಕುಮಾರಸ್ವಾಮಿ ಮಾಡಿದ್ದೇವೆ. ಈ ಬಗ್ಗೆ ಅಂತಿಮ ತೀರ್ಮಾನ ಚುನಾವಣೆ ಘೋಷಣೆ ನಂತರ ಮಾಡುತ್ತೇವೆ ಎಂದರು.

ನಿಖಿಲ್ ಕುಮಾರಸ್ವಾಮಿಯನ್ನು ರಾಜಕಾರಣಕ್ಕೆ ತರುವುದಕ್ಕೆ ನನಗೆ ಇಷ್ಟವಿರಲಿಲ್ಲ. ಮುಖಂಡರ ಒತ್ತಡದ ಮೇರೆಗೆ ಅವರನ್ನ ರಾಜಕಾರಣಕ್ಕೆ ತಂದೆ. ಕುಟುಂಬ ರಾಜಕಾರಣದ ವಿಚಾರದಲ್ಲಿ ನಾನು ಈಗ ಕೇವಲ ನನ್ನ ಕುಟುಂಬದ ಬಗ್ಗೆ ಮಾತ್ರ ಮಾತನಾಡುತ್ತೇನೆ. ನಾನು ನಮ್ಮ ಸಹೋದರರು ಬೇರೆಯಾಗಿದ್ದೇವೆ. ಹಾಗಾಗಿ ನಾನು, ನನ್ನ ಪತ್ನಿ, ನನ್ನ ಮಗನ ಬಗ್ಗೆ ಮಾತ್ರ ಪ್ರಸ್ತಾಪ ಮಾಡುತ್ತಿದ್ದೇನೆ. ಒಟ್ಟಾರೆ ಹೆಚ್.ಡಿ ದೇವೇಗೌಡರ ಕುಟುಂಬದ ಬಗ್ಗೆ ನಾನು ಮಾತನಾಡುತ್ತಿಲ್ಲ. ನನ್ನ ಕುಟುಂಬದ ಬಗ್ಗೆ ಮಾತನಾಡುತ್ತಿದ್ದೇನೆ ಎಂದು  ಹೆಚ್.ಡಿ ಕುಮಾರಸ್ವಾಮಿ ಹೇಳಿದರು.

ಹಿಜಾಬ್, ಕೇಸರಿ ಶಾಲು ವಿವಾದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್.ಡಿ ಕುಮಾರಸ್ವಾಮಿ, ಈ ವಿವಾದ ದೊಡ್ಡದಾಗಬೇಕು ಎಂಬುದು ಸರ್ಕಾರದ ಇಚ್ಚೆ. ಕಿಡಿಯಂತಿದ್ದ ವಿವಾದ ಬೆಂಕಿಯಾಗಿ ರಾಜ್ಯ ಹಬ್ಬಲು ಸರ್ಕಾರವೇ ಕಾರಣ. ಸರ್ಕಾರ ತನ್ನ ಆಡಳಿತದ ವೈಫಲ್ಯ ಮುಚ್ಚಿಕೊಳ್ಳಲು ಈ ವಿಚಾರವನ್ನು ದೊಡ್ಡದು ಮಾಡುತ್ತಿದೆ. ಕಾಂಗ್ರೆಸ್ ಮುಸ್ಲಿಂರನ್ನು ಎತ್ತಿಕಟ್ಟಿ ರಾಜಕಾರಣ ಮಾಡುತ್ತಿದೆ. ಬಿಜೆಪಿಯ ಅಂಗ ಸಂಸ್ಥೆಗಳು ಹಿಂದೂಗಳನ್ನ ಎತ್ತಕಟ್ಟಿ ರಾಜಕಾರಣ ಮಾಡುತ್ತಿದ್ದಾರೆ. ಈ ಎರಡೂ ಪಕ್ಷಗಳ ಉದ್ದೇಶಕ್ಕೆ ವಿದ್ಯಾರ್ಥಿಗಳು ಬಲಿಯಾಗಬಾರದು. ಈಗ ಗಲಾಟೆ ಮಾಡಿದ ವಿದ್ಯಾರ್ಥಿಗಳ ಮೇಲೆ ಮುಂದೆ ಕೇಸ್ ಬೀಳುವುದು ನಿಶ್ಚಿತ. ಈಗ ಬಂಧನವಾಗಿರುವ ವಿದ್ಯಾರ್ಥಿಗಳಲ್ಲಿ ಯಾರು ಬಿಜೆಪಿ, ಕಾಂಗ್ರೆಸ್ ಮುಖಂಡರ ಮಕ್ಕಳಿಲ್ಲ. ಇದನ್ನು ವಿದ್ಯಾರ್ಥಿಗಳು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ  ತಿಳಿಸಿದರು.

Key words: mysore-Former CM-HD Kumaraswamy