ಫ್ಯೂಸ್ ಇಲ್ಲ ಎಂಬ ಹೇಳಿಕೆ ವಿಚಾರ: ಹೆಚ್.ಡಿ ಕುಮಾರಸ್ವಾಮಿಗೆ ತಿರುಗೇಟು ನೀಡಿದ ಮಾಜಿ ಸಚಿವ ಜಿ.ಟಿ ದೇವೇಗೌಡ…

ಮೈಸೂರು,ಡಿ,11,2019(www.justkannada.in): ಉಪಚುನಾವಣೆ ಮತ್ತು ಜೆಡಿಎಸ್ ಕಾರ್ಯಕ್ರಮಗಳಿಂದ ದೂರ ಉಳಿದು ಜೆಡಿಎಸ್ ನಾಯಕರ ವಿರುದ್ದ ಅಸಮಾಧಾನ ವ್ಯಕ್ತಪಡಿಸುತ್ತಿದ್ದ ಮಾಜಿ ಸಚಿವ ಜಿ.ಟಿ ದೇವೇಗೌಡರು ಇದೀಗ ಮತ್ತೆ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ವಿರುದ್ದ ಕಿಡಿಕಾರಿದ್ದಾರೆ.

ಜಿ.ಟಿ.ದೇವೇಗೌಡ ಫ್ಯೂಸ್ ಇಲ್ಲ ಎಂಬ ಹೇಳಿಕೆ  ನೀಡಿದ್ದ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿಗೆ ಮೈಸೂರಿನಲ್ಲಿ ತಿರುಗೇಟು ನೀಡಿರುವ ಮಾಜಿ ಸಚಿವ ಜಿ.ಟಿ.ದೇವೇಗೌಡ, ಕುಮಾರಣ್ಣ ಮುತ್ತಿನಂತಹ ಮಾತು ಆಡುತ್ತಾರೆ ಅಂತ ಎಲ್ಲರೂ ಅಂದುಕೊಂಡಿದ್ರು. ಆದ್ರೆ ಇತ್ತೀಚೆಗೆ ಆಡುತ್ತಿರುವ ಮಾತುಗಳು ಅಭಿಮಾನಿಗಳನ್ನೇ ಕೆರಳಿಸಿದೆ. ಅವರು ಆಡುವ ಮಾತಿನ ಮೇಲೆ ಹಿಡಿತ ಇಟ್ಟುಕೊಳ್ಳಲಿ ಎಂದು ತಿಳಿಸಿದರು.

ಈಗ ಕುಮಾರಸ್ವಾಮಿ ಅವರ ನಡೆಯೇ ಬೇರೆ, ನುಡಿಯೇ ಬೇರೆ ಆಗಿದೆ. ಇನ್ನಾದರೂ ಅವರು  ಬದಲಾಗಬೇಕು ಎಂದು ಜಿ.ಟಿ ದೇವೇಗೌಡರು ಸಲಹೆ ನೀಡಿದ್ದಾರೆ.

Key words:  mysore-former minister- GT devegowda-outrage-hd kumaraswamy