Tuesday, September 29, 2026

BDA Apartments

ಅಹಿತಕರ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡರೇ ಏನು ಪ್ರಯೋಜನ..? ಮಾಜಿ ಸಿಎಂ ಸಿದ್...
Home Front Page ಅಹಿತಕರ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡರೇ ಏನು ಪ್ರಯೋಜನ..? ಮಾಜಿ ಸಿಎಂ ಸಿದ್ಧರಾಮಯ್ಯ ಸೂಚನೆ.

ಅಹಿತಕರ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡರೇ ಏನು ಪ್ರಯೋಜನ..? ಮಾಜಿ ಸಿಎಂ ಸಿದ್ಧರಾಮಯ್ಯ ಸೂಚನೆ.

ಮೈಸೂರು,ಸೆಪ್ಟಂಬರ್,1,2021(www.justkannada.in):  ಮೈಸೂರಿನಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣ ಸಂಬಂಧ ಅಹಿತಕರ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡರೇ ಏನು ಪ್ರಯೋಜನ..? ಎಂದು ಮಾಜಿ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದ್ದಾರೆ.

ಸಾಮೂಹಿಕ ಅತ್ಯಾಚಾರ ನಡೆದ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಪೊಲೀಸ್ ಅಧಿಕಾರಿಗಳ ಬಳಿ ವಿಪಕ್ಷ ನಾಯಕ ಸಿದ್ಧರಾಮಯ್ಯ ಮಾಹಿತಿ ಪಡೆದರು. ಈ ವೇಳೆ ಮಾತನಾಡಿದ ಸಿದ್ಧರಾಮಯ್ಯ, ನಿರ್ಜನ ಪ್ರದೇಶಕ್ಕೆ ಜನರು ಬರುತ್ತಿದ್ದರೇ ಪೊಲೀಸರು ನಿಗಾವಹಿಸಬೇಕು. ಪೊಲೀಸ್ ಗಸ್ತು ಹೆಚ್ಚಿಸಿ ಎಂದು ಸೂಚನೆ ನೀಡಿದರು.

ಅಹಿತಕರ ಘಟನೆ ನಡೆದ ಬಳಿಕ ಎಚ್ಚೆತ್ತುಕೊಂಡರೇ ಏನು ಪ್ರಯೋಜನ. ಅನಾಹುತ ನಡೆಯುವ ಮುಂಚೆ ಎಚ್ಚೆತ್ತುಕೊಳ್ಳಬೇಕು. ಇನ್ನು ಮುಂದಾದರೂ ಎಚ್ಚೆತ್ತುಕೊಳ್ಳಿ ಎಂದು ಸಲಹೆ ನೀಡಿದರು.

Key words: mysore-gang rape-case- Former CM- Siddaramaiah-police officer