ಮೈಸೂರಿನಲ್ಲಿ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್ ಪ್ರಕರಣ: ಪೊಲೀಸ್ ಅಧಿಕಾರಿಗಳ ಸಭೆ ಕರೆದ ಸಚಿವ ಎಸ್.ಟಿ ಸೋಮಶೇಖರ್.

ಮೈಸೂರು,ಆಗಸ್ಟ್,25,2021(www.justkannada.in): ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ ಸೋಮಶೇಖರ್ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ.

ಗ್ಯಾಂಗ್ ರೇಪ್ ಪ್ರಕರಣ ಬೆಳಕಿಗೆ ಬಂದ ಬಳಿಕ ಆಲರ್ಟ್ ಆದ ಸಚಿವ ಎಸ್ ,ಟಿ ಸೋಮಶೇಖರ್ ಇಂದು ಸಂಜೆ ಪೊಲೀಸ್ ಅಧಿಕಾರಿಗಳ ಸಭೆ ಕರೆದಿದ್ದಾರೆ. ಪೊಲೀಸ್ ಆಯುಕ್ತರ ಕಚೇರಿಯಲ್ಲಿ ಸಭೆ ನಡೆಯಲಿದ್ದು, ಪೊಲೀಸ್ ಕಮಿಷನರ್, ಡಿಸಿಪಿ ಸೇರಿ ಹಿರಿಯ ಅಧಿಕಾರಿಗಳು ಭಾಗಿಯಾಗಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಇನ್ನು ಕಳೆದ ಎರಡು ದಿನಗಳ ಹಿಂದೆ ದರೋಡೆಕೋರರು ಚಿನ್ನದ ಅಂಗಡಿ ಲೂಟಿ ಮಾಡಿ ಪರಾರಿಯಾಗುವ ವೇಳೆ ಅಮಾಯಕ ವ್ಯಕ್ತಿಯ ಮೇಲೆ ಗುಂಡು ಹಾರಿಸಿ ಕೊಂದಿದ್ದರು. ಈ ಪ್ರಕರಣ ಸಾಕಷ್ಟು ಸದ್ದು ಮಾಡಿತ್ತು. ಇದೀಗ ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ ಪ್ರಕರಣ ಬೆಳಕಿಗೆ ಬಂದಿದೆ. ಹೀಗಾಗಿ ಈ ಎರಡು ಪ್ರಕರಣಗಳ ಬಗ್ಗೆ ಸಚಿವ ಎಸ್.ಟಿ ಸೋಮಶೇಖರ್ ಮಾಹಿತಿ ಪಡೆಯಲಿದ್ದಾರೆ.

Key words: mysore-Gang rape -case -Minister -ST Somashekhar – meeting – police officers.