ಮೈಸೂರು,ಅಕ್ಟೋಬರ್,9,2025 (www.justkannada.in): ಮೈಸೂರಿನಲ್ಲಿ10 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಕೊಲೆ ಆರೋಪಿಯ ಗುರುತು ಪತ್ತೆಹಚ್ಚಿದ್ದಾರೆ.
ಸಿದ್ದಲಿಂಗಪುರ ನಿವಾಸಿ ಕಾರ್ತಿಕ್ (31) ಕೊಲೆ ಆರೋಪಿ. , ಎರಡು ವರ್ಷ ಜೈಲಿನಲ್ಲಿದ್ದು ಕಳೆದ ನಾಲ್ಕು ತಿಂಗಳ ಹಿಂದಷ್ಟೇ ಬಿಡುಗಡೆಯಾಗಿದ್ದ ಆರೋಪಿ ಕಾರ್ತಿಕ್ ಊರು ಸೇರದೆ, ಮಧ್ಯ ಸೇವಿಸಿ ಎಲ್ಲೆಂದರಲ್ಲಿ ಅಲೆಯುತ್ತಿದ್ದ.
ಇದೀಗ ಸಿಸಿಟಿವಿ ದೃಶ್ಯಾವಳಿ ಆಧರಿಸಿದ ಪೊಲೀಸರು ಆರೋಪಿಯನ್ನ ಪತ್ತೆಹಚ್ಚಿದ್ದಾರೆ. ಬಲೂನ್ ಮಾರಲು ಕುಟುಂಬದ ಜೊತೆ ಬಂದಿದ್ದ 10 ವರ್ಷದ ಬಾಲಕಿಯ ಶವ ದೊಡ್ಡಕೆರೆ ಮೈದಾನದ ಬಳಿ ಪತ್ತೆಯಾಗಿತ್ತು. ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿತ್ತು.
Key words: Mysore, Girl, murder case, Accused, identified